ರಾಹುಲ್ ಶಿಕ್ಷೆಗೆ ಸುಪ್ರೀಂ ತಡೆ

ನವದೆಹಲಿ,ಆ.೪- ಮೋದಿ ಉಪನಾಮ’ದ ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ.ಈ ಮೂಲಕ ಸೂರತ್ ನ್ಯಾಯಾಲಯ, ಗುಜರಾತ್ ಹೈಕೋರ್ಟ್‌ನಲ್ಲಿ ಈ ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿ ರಾಹುಲ್ ಗಾಂಧಿ ಅವರಲ್ಲಿ ಹೆಚ್ಚಿಸಿದ್ದ ಆತಂಕವನ್ನು ಸುಪ್ರೀಂಕೋರ್ಟ್ ದೂರ ಮಾಡಿದೆ. ರಾಹುಲ್ ಗಾಂಧಿ ಅವರಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ನೆಮ್ಮದಿಯ ನಿಟ್ಟಿಸಿರುವ ಬಿಡುವಂತಾಗಿದೆ.ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ, ರಾಹುಲ್ ಗಾಂಧಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ.ತಮ್ಮ “ಮೋದಿ ಉಪನಾಮ” ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಈ ಹಿಂದೆ ಗುಜರಾತ್ ಹೈಕೋರ್ಟ್ ವಜಾಗೊಳಿಸಿದ್ದ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ಶಿಕ್ಷೆಗೆ ಮಧ್ಯಂತ್ಯರ ತಡೆ ನೀಡಿದೆ.
೨೦೧೯ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದ ಮುಳಬಾಗಿಲಿನಲ್ಲಿ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆ ಆಧರಿಸಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು,ರಾಹುಲ್ ಗಾಂಧಿ ಅವರು ತಮ್ಮ ಹೇಳೀಕೆಯಲ್ಲಿ “ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ ಎಂದು ಪ್ರಶ್ನಿಸಿದ್ದರು.
ರಾಹುಲ್ ಗಾಂಧಿ ಅವರಿಗೆ ಕ್ರಿಮಿನಲ್ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಎರಡು ವರ್ಷ ಶಿಕ್ಷೆ ನೀಡುತ್ತಿದ್ದಂತೆ ಲೋಕಸಭಾ ಸಚಿವಾಂಲಯ ಮರುದಿನ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ವಜಾ ಮಾಡಿತ್ತು. ಅಲ್ಲದೆ ರಾಹುಲ್ ಗಾಂಧಿ ವಾಸ ಮಾಡುತ್ತಿದ್ದ ದೆಹಲಿಯ ಬಂಗಲೆಯನ್ನೂ ಖಾಲಿ ಮಾಡಿಸಲಾಗಿತ್ತು.ಸುಪ್ರೀಂಕೋರ್ಟ್ ತೀರ್ಪಿನಿಂದ ರಾಹುಲ್ ಗಾಂಧಿ ಅವರು ಮರಳಿ ಲೋಕಸಭಾ ಸದಸ್ಯ ಸ್ಥಾನ ಪಡೆಯಲಿದ್ದಾರೆ.ಅಲ್ಲದೆ ತೀರ್ಪಿಗೆ ತಡೆ ನೀಡದೇ ಇದ್ದರೆ ಅವರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿತ್ತು. ಇದೀಗ ನಿಟ್ಟಿಸಿರುವ ಬಿಟ್ಟಿದ್ದಾರೆ.ರಾಹುಲ್ ಗಾಂಧಿ ಪರ ಹಿರಿಯ ವಕೀಲಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ ವಿಚಾರಣೆ ಪೂರ್ಣಗೊಂಡಿದೆ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಲಾಗಿದೆ, ಆದರೂ ಇದುವರೆಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದರು.
ಏಕರೂಪವಲ್ಲದ…ಸಮುದಾಯಗಳು, ಜಾತಿಗಳು ಮತ್ತು ’ಮೋದಿ’ ಎಂಬ ಹೆಸರು ಹೊಂದಿರುವ ಗುಂಪುಗಳು ಸಂಪೂರ್ಣವಾಗಿ ವಿಭಿನ್ನವಾಗಿವೆ” ಎಂದು ಹೇಳಿದ್ದರು.
ಮತ್ತೆ ಸಂಸದ
ಸೂರತ್ ನ್ಯಾಯಾಲಯದ ತೀರ್ಪಿನಿಂದ ಲೋಕಸಭಾ ಸದಸ್ಯ ಸ್ಥಾನ ಕಳೆದುಕೊಂಡಿದ್ದ ರಾಹುಲ್ ಗಾಂಧಿ ಅವರು ಮತ್ತೆ ಸಂಸದರಾಗಲಿದ್ಧಾರೆ.ಸುಪ್ರೀಂ ಕೋರ್ಟ್ ಆದೇಶದ ನಂತರ ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ.ವಿಚಾರಣಾ ನ್ಯಾಯಾಧೀಶರು ಪ್ರಕರಣದಲ್ಲಿ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೀಗಾಗಿ ಮರಳಿ ಲೋಕಸಭಾ ಸದಸ್ಯ ಸ್ಥಾನ ಮತ್ತು ಚುನಾವಣೆಗೆ ನಿಲ್ಲಲು ಇದ್ದ ಅಡೆ ತಡೆ ದೂರವಾಗಿದೆ.