ರಾಹುಲ್ ಸಂಸತ್ ಸದಸ್ಯತ್ವ ಅನರ್ಹ ಕಾಂಗ್ರೆಸ್ ಧರಣಿ ಸತ್ಯಾಗ್ರಹ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮಾ.26: ನಗರದ ವಿಮ್ಸ್  ಬಳಿ ಇರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಿದ್ದನ್ನು ಖಂಡಿಸಿ ಧರಣಿ ಸತ್ಯಾಗ್ರಹ ನಡೆಸಲಾಯಿತು..
ಪಕ್ಷದ ಜಿಲ್ಲಾ ಅಧ್ಯಕ್ಷ ಜಿ. ಎಸ್.ಮಹಮ್ಮದ್ ರಫೀಕ್ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಪಕ್ಷದ ಮುಖಂಡರು, ಪಾಲಿಕೆ ಸದಸ್ಯರು, ವಿವಿದ್ ಘಟಕಳ ಮುಖಂಡರು ಪಾಲ್ಗೊಂಡಿದ್ದರು.
ಪಕ್ಷದ ಯುವ ನಾಯಕ  ರಾಹುಲ್ ಗಾಂಧಿ ಅವರ ಮೇಲೆ ಸುಳ್ಳು ಆರೋಪ ಹೊರಿಸಿ, ನ್ಯಾಯಾಂಗ ವ್ಯವಸ್ಥೆಯನ್ನು ದುರುಪಯೋಗ ಪಡಿಸಿಕೊಂಡು, ಶಿಕ್ಷೆ ವಿಧಿಸಿ, ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಈ ದೇಶದ ಜನತೆ ಸಹಿಸುವುದಿಲ್ಲ ಎಂದು ತಮ್ಮ ಆಕ್ರೋಶವನ್ನು ಘೋಷಣೆ ಕೂಗುವ ಮೂಲಕ ವ್ಯಕ್ತಪಡಿಸಿದರು.