
ಕಲಾಪಕ್ಕೆ ಅಡ್ಡಿ
ನವದೆಹಲಿ,ಮಾ.೧೩- ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಎನ್ನುವ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಂಸತ್ತಿನ ಉಭಯ ಸದನಗಳಲ್ಲಿ ಆಡಳಿತ ಪಕ್ಷದಸ ಸದಸ್ಯರು ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಕಲಾಪ ಮಧ್ಯಾಹ್ನದವರೆಗೆ ವ್ಯರ್ಥವಾಗುವಂತಾಯಿತು.ಲಂಡನ್ ನಲ್ಲಿ ರಾಹುಲ್ ಗಾಂಧಿ ಅವರ ಹೇಳಿಕೆ ಖಂಡನೀಯ ಅವರು ಅವಮಾನಕರ ರೀತೀಯಲ್ಲಿ ಹೇಳಿಕೆ ನೀಡಿದ್ದಾರೆ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸುವಂತೆ ಸಚಿವರಾದ ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಷಿ ಮತ್ತು ಪಿಯೂಶ್ ಗೋಯಲ್ ಸೇರಿದಂತೆ ಅನೇಕ ಆಡಳಿತ ಪಕ್ಷದ ಸದಸ್ಯರು ಆಗ್ರಹಿಸಿದರು.ಇದಕ್ಕೆ ಕಾಂಗ್ರೆಸ್ ಮತ್ತು ಇನ್ನಿತರೆ ಪ್ರತಿಪಕ್ಷಗಳು ಧ್ವನಿ ಗೂಡಿಸಿದ್ದರಿಂದ ಗದ್ದಲದ ವಾತಾವರಣ ನಿರ್ಮಾಣವಾಗಿ ರಾಜ್ಯ ಸಭೆ ಮತ್ತು ಲೋಕಸಭೆಯಲ್ಲಿ ಕಲಾಪ ೨ ಗಂಟೆಯ ತನಕ ಮುಂದೂಡುವಂತಾಯಿತು.ಒಂದು ತಿಂಗಳ ನಂತರ ಆರಂಭವಾದ ಕೇಂದ್ರ ಮುಂಗಡ ಪತ್ರದ ಮೇಲಿನ ಅಧಿವೇಶನದ ಎರಡನೇ ಭಾಗದ ಮೊದಲದಿನವೇ ಕಲಾಪ ಗಲಾಟೆ ಗದ್ದಲ ವಾಕ್ಸಮರಕ್ಕೆ ವೇದಿಕೆಯಾಯಿತು.
ಈ ವೇಳೆ ಪ್ರತಿಕ್ರಿಯಿಸಿದ ಸಚಿವರಾದ
ಪ್ರಲ್ಹಾದ್ ಜೋಶಿ ಮತ್ತು ಪಿಯೂಷ್ ಗೋಯಲ್ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ತುರ್ತು ಪರಿಸ್ಥಿತಿಯಲ್ಲಿ ಮೂಲಭೂತ ಕರ್ತವ್ಯಗಳ ನಷ್ಟದ ಬಗ್ಗೆ ಸಂಸತ್ತಿಗೆ ನೆನಪು ಮಾಡಿ ಕಾಂಗ್ರೆಸ್ ವಿರುದ್ದ ಹರಿಹಾಯ್ದರು.
ಲೋಕಸಭೆಯಲ್ಲಿ ರಾಜನಾಥ್ ಸಿಂಗ್ ಮತ್ತು ಪ್ರಲ್ಹಾದ್ ಜೋಶಿ ಮತ್ತು ರಾಜ್ಯಸಭೆಯಲ್ಲಿ ಪಿಯೂಷ್ ಗೋಯಲ್ ಅವರು ರಾಹುಲ್ ಗಾಂಧಿಯವರ ಹೇಳಿಕೆ ಖಂಡಿಸಿದ ನಂತರ ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಅಧಿವೇಶನದಲ್ಲಿ ಕೋಲಾಹಕ್ಕೆ ಕಾರಣವಾಯಿತು.ಲೋಕಸಭೆಯಲ್ಲಿ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿ “ಈ ಸದನದ ಸದಸ್ಯರಾಗಿರುವ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಭಾರತವನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆಗಳನ್ನು ಈ ಸದನದ ಎಲ್ಲಾ ಸದಸ್ಯರು ಖಂಡಿಸಬೇಕು ಮತ್ತು ಅವರು ಕ್ಷಮೆಯಾಚಿಸಲು ಕೇಳಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದು ತಿಳಿಸಿದರು.ಈ ಮಧ್ಯೆ ಪ್ರಲ್ಹಾದ್ ಜೋಶಿ ಮತ್ತು ಪಿಯೂಷ್ ಗೋಯಲ್ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ತುರ್ತು ಪರಿಸ್ಥಿತಿಯಲ್ಲಿ ಮೂಲಭೂತ ಕರ್ತವ್ಯಗಳ ನಷ್ಟದ ಬಗ್ಗೆ ಸಂಸತ್ತಿಗೆ ನೆನಪಿಸಲು ಆಯ್ಕೆ ಮಾಡಿದರು.
“ಆಗ ಪ್ರಜಾಪ್ರಭುತ್ವಕ್ಕೆ ಏನಾಗಿತ್ತು ಎಂದು ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು. ಈ ಹಂತದಲ್ಲಿ, ವಿರೋಧ ಪಕ್ಷದ ನಾಯಕರು ಘೋಷಣೆಗಳನ್ನು ಕೂಗಿದರುವಿರೋಧ ಪಕ್ಷದ ನಾಯಕರು ಘೋಷಣೆಗಳನ್ನು ಎತ್ತಿದರು ಮತ್ತು ಸದನದ ಬಾವಿಯ ಬಳಿ ಜಮಾಯಿಸಿದರು, ಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಮಧ್ಯಾಹ್ನ ೨ ಗಂಟೆಗೆ ಮುಂದೂಡುವಂತೆ ಒತ್ರಾಯಿಸಿದರು.
ಮಧ್ಯಾಹ್ನದ ವರೆಗೆ ಮುಂದೂಡಿಕೆ
ರಾಜ್ಯಸಭೆಯಲ್ಲೂ ರಾಹುಲ್ ಗಾಂಧಿ ಎಲ್ಲರನ್ನೂ ಅವಮಾನಿಸಿದ್ದಾರೆ ಎಂದು ಪಿಯೂಷ್ ಗೋಯಲ್ ಹೇಳಿದ್ದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು ಆಡಳಿತ ಪ್ರತಿಪಕ್ಷಗಳ ಸದಸ್ಯರ ನಡುವೆ ಗದ್ದಲ ಗಲಾಟಡ ಆರಂಭವಾದ ಹಿನ್ನೆಲೆಯಲ್ಲಿ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು ಕಾಲಪವನ್ನು ಮಧ್ಯಾಹ್ನ ೨ ಗಂಟೆಗೆ ಮುಂದೂಡಿದರು.