
ಬಹಳ ವರ್ಷಗಳ ನಂತರ ಬಾಲಿವುಡ್ ಗಾಯಕ ಕುನಾಲ್ ಗಾಂಜವಾಲ ಕಂಠಸಿರಿಯಲ್ಲಿ ರಿಚ್ಚಿ ಹಾಡು ಮೂಡಿಬಂದಿದೆ . ನೂತನ ಪ್ರತಿಭೆ ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ ಚಿತ್ರ “ರಿಚ್ಚಿ”.
ಚಿತ್ರದ ಮೊದಲ ಹಾಡು “ಕಳೆದು ಹೋಗಿರುವೆ ” ಹಾಡು ಬಿಡುಗಡೆಗೆ ಸಜ್ಜಾಗಿದೆ .ಗೌಸ್ ಫಿರ್ ಬರೆದಿರುವ ಈ ರೊಮ್ಯಾಂಟಿಕ್ ಹಾಡನ್ನು ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡ ನಟ, ನಿರ್ದೇಶಕ, ನಿರ್ಮಾಪಕ ರಿಚ್ಚಿ,ಬಹಳ ವರ್ಷಗಳ ನಂತರ ಕುನಾಲ್ ಗಾಂಕಾವಾಲ ಹಾಡಿರುವ ಕನ್ನಡ ಚಿತ್ರಗೀತೆಯಿದು. ಅಗಸ್ತ್ಯ ಸಂತೋಷ್ ಸಂಗೀತ ನೀಡಿರುವ ಈ ಹಾಡಿಗೆ ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಮಾಡಿದ್ದಾರೆ. ರಿಚ್ಚಿ ಹಾಗೂ ರಮೋಲಾ ಹೆಜ್ಜೆ ಹಾಕಿದ್ದಾರೆ ಎಂದರು.
ಚಿತ್ರವನ್ನ ಬೆಂಗಳೂರು ಮಡಿಕೇರಿ ಮೈಸೂರು ಚಿಕ್ಕಮಗಳೂರು ಸೇರಿದಂತೆ ಮತ್ತಿತರ ಕಡೆ ಚಿತ್ರೀಕರಣ ಮಾಡಲಾಗಿದೆ ಎಲ್ಲಾ ಅಂದುಕೊಂಡಂತೆ ಆದರೆ ಆಗಸ್ಟ್ ತಿಂಗಳಲ್ಲಿ ಚಿತ್ರ ತೆರೆಗೆ ತರುವ ಉದ್ದೇಶ ಹೊಂದಲಾಗಿದೆ ಎನ್ನುವ ವಿವರ ಅವರದು.
” ರಿಚ್ಚಿ” ಲವ್ ಕಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಚಿತ್ರದ ಹಾಡುಗಳಿಗೂ ಹೆಚ್ಚಿನ ಮಹತ್ವ ನೀಡಲಾಗಿದೆ. ಚಿತ್ರದ ಹಾಡುಗಳು ಚೆನ್ನಾಗಿ ಬಂದಿದೆ ಜೊತೆಗೆ ಚಿತ್ರವು ಚೆನ್ನಾಗಿ ಮೂಡಿ ಬರಬೇಕು ಎನ್ನುವ ಉದ್ದೇಶದಿಂದ ನಾಯಕನಾಗಿದ್ದ ನಾನು ನಿರ್ದೇಶಕ ನಿರ್ಮಾಪಕನೂ ಆಗುವ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಹೇಳಿದರು
ಅಗಸ್ತ್ಯ ಸಂತೋಷ್ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಉತ್ತಮವಾಗಿ ಮೂಡಿಬಂದಿದೆ. ಚಿತ್ರದ ಮೊದಲ ಹಾಡು ಮೇ ಹದಿನೆಂಟರಂದು ಬಿಡುಗಡೆಯಾಗಲಿದ್ದು, ಜೂನ್ ಅಥವಾ ಜುಲೈನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ರಿಚ್ಚಿ ತಿಳಿಸಿದ್ದಾರೆ.