ರೆಡ್ ಕ್ರಾಸ್ ಸಂಸ್ಥೆ ಬಳ್ಳಾರಿ ಜಿಲ್ಲಾ ಶಾಖೆಗೆ ಅತ್ಯುತ್ತಮ ಪ್ರಶಸ್ತಿ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರಿನ ರಾಜಭವನದಲ್ಲಿ ನಡೆದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಮಾನ್ಯ ಸಭೆಯಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್, ಇವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬಳ್ಳಾರಿ ಜಿಲ್ಲಾ ಶಾಖೆಗೆ ಕೋವಿಡ್-19 ಸಂದರ್ಭದಲ್ಲಿ ಸಲ್ಲಿಸಿದ್ದ ಸೇವೆಯನ್ನು ಗುರುತಿಸಿ 2019ನೇ ಸಾಲಿನ ಅತ್ಯುತ್ತಮ ಪ್ರಶಸ್ತಿಯನ್ನು ನೀಡಿದರು.
ಜಿಲ್ಲಾಧಿಕಾರಿಗಳು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಳ್ಳಾರಿ ಶಾಖೆಯ ಅಧ್ಯಕ್ಷರಾದ ಪವನ್ ಕುಮಾರ್ ಮಾಲಪಾಟಿ ಪ್ರಶಸ್ತಿ ಸ್ವೀಕರಿಸಿದರು.
ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಶ್ರೀ ಎಂ.ಎ.ಷಕೀಬ್, ಕಾರ್ಯದರ್ಶಿಗಳು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಳ್ಳಾರಿ. ಪ್ರೋಫೆಸರ್ ವಿರೇಶ್, ಕಾರ್ಯಕಾರಿ ಸಮಿತಿ ಸದಸ್ಯರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಳ್ಳಾರಿ. ಶ್ರೀಮತಿ ರೇಖಾ ಪ್ರಕಾಶ್, ಕಾರ್ಯಕಾರಿ ಸಮಿತಿ ಸದಸ್ಯರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಹೊಸಪೇಟೆ. ಇವರು ಉಪಸ್ಥಿತರಿದ್ದರು.