ರೆಮ್ ಡಿಸಿವಿರ್ ರಫ್ತು ನಿರ್ಬಂಧ: ಕೇಂದ್ರ ಆದೇಶ

ನವದೆಹಲಿ, ಏ.11 – ದೇಶದಲ್ಲಿ ಕೊರೋನಾ ಸೋಂಕು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರೆಮ್ ಡಿಸಿವಿರ್ ಇಂಜಕ್ಷನ್ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ…

ದೇಶದಲ್ಲಿ ಕೋರೊನೊ ಸೋಂಕಿನ ಪರಿಸ್ಥಿತಿ ಸುಧಾರಿಸುವವರೆಗೂ ರೆಮಿಡಿಸಿವಿರ್ ರಫ್ತು ಮಾಡುವುದಕ್ಕೆ ನಿಷೇಧ ಹೇರಲಾಗಿದೆ‌.

ರೆಮ್ ಡಿಸಿವಿರ್ ಔಷಧಿ ಮತ್ತು ಇಂಜಕ್ಷನ್ ವಿವಿಧ ದೇಶಗಳಿಗೆ ರಫ್ತು ಮಾಡುವುದನ್ನು ತಕ್ಷಣದಿಂದಲೇ ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ದೇಶದಲ್ಲಿ ಕೊರೊನೊ ಸೋಂಕು ಸಂಖ್ಯೆ ಗಣನೀಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸದ್ಯ ದೇಶದಲ್ಲಿ 11.08 ಲಕ್ಷ ಮಂದಿಗೆ ಸಕ್ರಿಯ ಪ್ರಕರಣಗಳಿವೆ.ಜೊತೆಗೆ ದಿನದಿಂದ ದಿನಕ್ಕೆ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಕ್ರಮಕೈಗೊಳ್ಳಲಾಗಿದೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಕೊರೋನಾ ಸೋಂಕಿನ ಲಸಿಕೆಯನ್ನು ವಿದೇಶಗಳಿಗೆ ರಫ್ತು ಮಾಡುವುದನ್ನು ತಕ್ಷಣ ನಿಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದರು.

ಇದರ ಜೊತೆಗೆ ದೇಶದಲ್ಲಿ ಸೋಂಕು ಪ್ರಮಾಣ ನಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ ರೆಮ್ ಡಿ ಸಿವಿರ್ ಔಷಧ ಮತ್ತು ಇಂಜೆಕ್ಷನ್ ರಫ್ತು ಮಾಡುವುದನ್ನು ನಿಲ್ಲಿಸಿದೆ.