ಬಳ್ಳಾರಿ,ಜೂ.22: ನಗರದ ರೇಡಿಯೋ ಪಾರ್ಕ್‍ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧವಾರದಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿನಿಯರಿಗೆ ಯೋಗಾಭ್ಯಾಸ ಕೈಗೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ವೀರ ರಾಘವುಲು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯೋಗ ಎನ್ನುವುದು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಎಲ್ಲರೂ ಆರೋಗ್ಯವನ್ನು ಕಾಪಾಡಲು ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ದೈಹಿಕ ನಿರ್ದೇಶಕರಾದ ಮಂಜಮ್ಮ ಅವರು ಯೋಗ ದಿನಾಚರಣೆಯ ಮಹತ್ವ ತಿಳಿಸಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ.ಪ್ರಜ್ಞಾ ಕೆ.ವಿ, ಹಿರಿಯ ಪ್ರಾಧ್ಯಾಪಕರಾದ ಡಾ.ಮಲ್ಲಿಕಾರ್ಜುನ.ಕೆ, ಇಂದ್ರಿಪಿ ಮಲ್ಲಿಕಾರ್ಜುನ, ಮರಿಗಾದಿಲಿಂಗಪ್ಪ, ಡಾ.ಕೊಟ್ರಪ್ಪ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.