ರೇಣುಕಾಚಾರ್ಯರ ಜಯಂತಿ ಆಚರಣೆ

ತುಮಕೂರು, ಮಾ. ೨೭- ನಗರದಲ್ಲಿ ಜಗದ್ಗುರು ಶ್ರೀ ಪಂಚಾಚಾರ್ಯ ಸೇವಾ ಟ್ರಸ್ಟ್ ಮತ್ತು ಶ್ರೀ ಶಿವಶ್ರೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ. ವತಿಯಿಂದ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತ್ಯೋತ್ಸವವನ್ನು ಆಚರಿಸಲಾಯಿತು.
ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಶಿವಶ್ರೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ. ಕಚೇರಿಯ ಮುಂಭಾಗ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಆಚರಿಸಲಾಯಿತು.
ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಶಾಸಕ ಜ್ಯೋತಿಗಣೇಶ್, ಪಾಲಿಕೆ ಸದಸ್ಯ ಸಿ.ಎನ್. ರಮೇಶ್, ತಹಶೀಲ್ದಾರ್ ಮೋಹನ್‌ಕುಮಾರ್ ಅವರು ಪುಷ್ಪನಮನ ಸಲ್ಲಿಸುವ ಮೂಲಕ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿದರು.
ರೇಣುಕಾಚಾರ್ಯರ ಜಯಂತಿ ಅಂಗವಾಗಿ ಬ್ಯಾಂಕ್ ವತಿಯಿಂದ ಪಾನಕ, ಮಜ್ಜಿಗೆ, ಹೆಸರುಬೇಳೆ ವಿತರಿಸಲಾಯಿತು.
ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಶಿವಶ್ರೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಭಸ್ಮಾಂಗಿ ರುದ್ರಯ್ಯ, ಉಪಾಧ್ಯಕ್ಷ ಉಮೇಶ್‌ಕುಮಾರ್, ನಿರ್ದೇಶಕರಾದ ಟಿ.ಆರ್. ಸದಾಶಿವಯ್ಯ, ಕರುಣಾರಾಧ್ಯ, ವಿರೂಪಾಕ್ಷ್, ಪ್ರಭು, ಜ್ಯೋತಿ, ಪೂರ್ಣಿಮಾ ಹಾಗೂ ಬ್ಯಾಂಕ್ ಸಿಬ್ಬಂದಿ ಪಾಲ್ಗೊಂಡಿದ್ದರು.