ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ: ಜಯಂತ್ಯೋತ್ಸವ ಹಾಗೂ ರಥೋತ್ಸವ ರದ್ದು

ಕಲಬುರಗಿ.ಮಾ.23:ರಾಜ್ಯಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್-19 ವೈರಸ್ ತಡೆಗಟ್ಟಲು ಅನುಕೂಲವಾಗುವಂತೆ ಇದೇ ಮಾರ್ಚ್ 26 ರಂದು ಕಾಳಗಿ ತಾಲೂಕಿನ ರೇವಗ್ಗಿ (ರಟಕಲ್) ಗ್ರಾಮದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಜರುಗಲಿರುವ ಜಯಂತ್ಯೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಭಕ್ತಾದಿಗಳು ಇದಕ್ಕೆ ಸಹಕರಿಸಬೇಕೆಂದು ರೇವಗ್ಗಿ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಆಡಳಿತಾಧಿಕಾರಿಗಳು ಹಾಗೂ ಸೇಡಂ ಸಹಾಯಕ ಆಯುಕ್ತರು ತಿಳಿಸಿದ್ದಾರೆ.