
ದಾವಣಗೆರೆ.ಫೆ.೨೫; ದಾವಣಗೆರೆಯ ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ ಇತ್ತೀಚಿಗೆ ನಗರದ ಶ್ರೀಮತಿ ಗೌರಮ್ಮ ನರಹರಿಶೇಟ್ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ.ಯಲ್ಲಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಭಾವಿ ತಯಾರಿ ಸಿದ್ಧತಾ ಉಚಿತ ಕಾರ್ಯಾಗಾರವನ್ನು ಅಚ್ಚುಕಟ್ಟಾಗಿ ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕ-ಶಿಕ್ಷಕಿಯರಿಗೆ ಮನಮುಟ್ಟುವಂತೆ ಉಪನ್ಯಾಸ ನೀಡಿದ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಯಕ್ಷರಂಗ ಸಂಸ್ಥೆಗಳ ಸಂಸ್ಥಾಪಕರೂ, ವಾಣಿಜ್ಯ ನಗರಿ ದಾವಣಗೆರೆಯನ್ನು ಸಾಂಸ್ಕೃತಿಕ ನಗರಿಯನ್ನಾಗಿ ಪರಿವರ್ತನೆಯ ಕಠಿಣ ಪರಿಶ್ರಮದ ಸಾಧನೆ ಮಾಡುತ್ತಿರುವ ‘ಅಮ್ಮ’, ‘ಕಾವ್ಯಶ್ರಿ’ ಮುಂತಾದ ಹತ್ತು ಹಲವು ಪ್ರಶಸ್ತಿಗಳ ಸರಮಾಲೆಗಳನ್ನು ಮುಡಿಗೇರಿಸಿಕೊಳ್ಳುತ್ತಿರುವ ಸಾಲಿಗ್ರಾಮ ಗಣೇಶ್ ಶೆಣೈಯವರನ್ನು ಅಭಿನಂದಿಸಿ ಗೌರವಿಸಿ ಸನ್ಮಾನಿಸಲಾಯಿತು.ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದ ಸಂಸ್ಥಾಪಕರಾದ ನಲ್ಲೂರು ಅರುಣಾಚಲ ರೇವಣಕರ್, ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್, ಪ್ರತಿಷ್ಠಾನದ ನಿರ್ದೇಶಕರಾದ ನಲ್ಲೂರು ಲಕ್ಷö್ಮಣ್‌ರಾವ್, ನಲ್ಲೂರು ರಾಜಕುಮಾರ್, ನಲ್ಲೂರು ನಾಗರಾಜ್ ರೇವಣಕರ್, ಶ್ರೀಮತಿ ಸುಪ್ರೀತಾ ಕಾರ್ತಿಕ್ ರೇವಣಕರ್, ದೈವಜ್ಞ ಸಮಾಜದ ನೂತನ ಅಧ್ಯಕ್ಷರಾದ ಪ್ರಶಾಂತ್ ವಿಶ್ವನಾಥ್ ವೆರ್ಣೇಕರ್, ಸಮಾರಂಭದ ನಿರೂಪಕರಾದ ಶ್ರೀಮತಿ ಶೈಲಾ ವಿನೋದ್ ದೇವರಾಜ್, ಶ್ರೀಮತಿ ಮಮತಾ ಕೊಟ್ರೇಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.