ರೇವಣ್ಣ ಬಂಧನ ಪ್ರಕರಣದಲ್ಲಿ ಮಧ್ಯಪ್ರವೇಶಿಸಲ್ಲ: ಸಿಎಂ

ಚಿಕ್ಕೋಡಿ: ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರೇವಣ್ಣ ಬಂಧನ ಬಳಿಕ ಶನಿವಾರ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಮಧ್ಯಪ್ರವೇಶ ಮಾಡಲ್ಲ‌ ಎಂದು‌ ಸ್ಪಷ್ಟಪಡಿಸಿದರು.
ರೇವಣ್ಣ ಅವರು ಅಪಹರಣ ಪ್ರಕರಣವೊಂದರ ಕುರಿತು ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ ಅವರಿಗೆ ಅರ್ಜಿ ವಜಾ ಆಗಿದ್ದು, ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಷ್ಟಡಿಗೆ ತೆಗೆದುಕೊಂಡಿರಬೇಕು ಎಂದು ಹೇಳಿದರು.