ರೇವೂರ್ (ಕೆ): ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ,ಮಾ.27-ಅಫಜಲಪುರ ತಾಲ್ಲೂಕಿನ ರೇವೂರ (ಕೆ) ಗ್ರಾಮದಲ್ಲಿ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಂದ್ರಕಾಂತ ಸಂಗಣ್ಣ ಸಾಲಿಗರ (45) ಆತ್ಮಹತ್ಯೆ ಮಾಡಿಕೊಂಡವರು.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಕಾಂತ ಅವರು ರೈತರೆನ್ನಲಾಗಿದೆ. ಸಾಲಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸುದ್ದಿ ತಿಳಿದು ರೇವೂರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಂತರ ಸತ್ಯಾಸತ್ಯತೆ ತಿಳಿಯಲಿದೆ. ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.