`ರೇವ್ ಪಾರ್ಟಿ’ ಚಿತ್ರೀಕರಣ ಮುಕ್ತಾಯ

ವಿಭಿನ್ನ ಕಥಾಹಂದರ ಹೊಂದಿರುವ `ರೇವ್ ಪಾರ್ಟಿ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ, ಚಿತ್ರದ ಪೆÇೀಸ್ಟ್ ಪೆÇ್ರಡಕ್ಷನ್ ಹಂತದಲ್ಲಿದೆ.

ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡಲು ನಿರ್ದೇಶಕ ರಾಜು ಬೋನಗಾನಿ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ.

ರಾಜು ಬೋನಗಾನಿ ನಿರ್ಮಿಸುತ್ತಿರುವ `ರೇವ್ ಪಾರ್ಟಿ’ ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ ಚರ್ಕವರ್ತಿ, ಐಶ್ವರ್ಯಾ ಗೌಡ, ಸುಚೇಂದ್ರ ಪ್ರಸಾದ್, ತಾರಕ್ ಪೆÇನ್ನಪ್ಪ ಮುಂತಾದವರು ನಟಿಸಿದ್ದಾರೆ. 

ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ,ನಿರ್ಮಾಪಕ ರಾಜು ಬೋನಗಾನಿ ಬೆಂಗಳೂರು, ಮಂಗಳೂರು, ಮೈಸೂರು ಮತ್ತು ಉಡುಪಿಯಲ್ಲಿ 35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದರು.

ಸಾಮಾನ್ಯವಾಗಿ ರೇವ್ ಪಾರ್ಟಿಗಳು ಬೆಂಗಳೂರು, ಉಡುಪಿ ಮತ್ತು ಗೋವಾದಲ್ಲಿ ನಡೆಯುತ್ತವೆ. ಈ ಪಾರ್ಟಿಗಳು ಹೇಗೆ ನಡೆಯುತ್ತವೆ ಅದರ ಹಿಂದೆ ಯಾರೆಲ್ಲಾ ಇರುತ್ತಾರೆ ಈ ಪಾರ್ಟಿಗಳು ಯುವ ಜನತೆಯ ಮೇಲೆ ಏನೆಲ್ಲಾ ದುಷ್ಪರಿಣಾಮಗಳು ಬೀರುತ್ತವೆ ಎಂಬ ಅಂಶಗಳನ್ನು  ಚಿತ್ರದ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇವೆ. `ರೇವ್ ಪಾರ್ಟಿ’ ಚಿತ್ರ ಇಂದಿನ ಯುವ ಜನತೆಗೆ ಬಹಳ ಇಷ್ಟವಾಗುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. ದಿಲೀಪ್ ಭಂಡಾರಿ ಸಂಗೀತ ವೆಂಕಟ್ ಮನ್ನಂ ಛಾಯಾಗ್ರಹಣ ಮಾಡಿದ್ದಾರೆ. ರವಿಕುಮಾರ್ ಅವರ ಸಂಕಲನ, ವೆಂಕಟ್ ಆರೆ ಕಲಾನಿರ್ದೇಶನ  ಚಿತ್ರಕ್ಕಿದೆ.