ರೇಸ್ ಕೋರ್ಸ್ ಅಂಗಳದಲ್ಲಿ ಸಿದ್ಧತೆಗಳ ವೀಕ್ಷಣೆ

ಮೈಸೂರು: ಜ.14:- ಜನವರಿ 15 ರಂದು ನಡೆಯಲಿರುವ ಯೋಗಥಾನ್‍ನಲ್ಲಿ ಭಾಗವಹಿಸಲು ಇದುವರೆಗೂ 37 ಸಾವಿರಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದು, 80 ಸಾವಿರದ ವರೆಗೆ ಜನರು ಭಾಗವಹಿಸಲಿದ್ದಾರೆ. ಭಾಗವಹಿಸುವವರಿಗೆ ಯಾವುದೇ ಸಮಸ್ಯೆ ಉಂಟಾಗದoತೆ ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜನವರಿ 15 ರಂದು ಯೋಗಥಾನ್ ಕಾರ್ಯಕ್ರಮ ನಡೆಯಲಿರುವ ಮೈಸೂರು ರೇಸ್‍ಕೋರ್ಸ್ ಮೈದಾನಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಸಿದ್ಧತೆಗಳ ಕುರಿತು ಪರಿಶೀಲಿಸಿದರು.
ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮವು ಬೆಳಿಗ್ಗೆ 8 ರಿಂದ 8.40ರವರಗೆ ನಡೆಯಲಿದ್ದು ಬೆಳಗ್ಗೆ 6 ರಿಂದಲೇ ಯೋಗಾಪಟುಗಳು ಮೈದಾನಕ್ಕೆ ಆಗಮಿಸಲಿದ್ದು ಬೆಳಿಗ್ಗೆ 7 ರಿಂದ ನೋಂದಣಿ ನಡೆಯಲಿದೆ. ಬೆಳಗ್ಗೆ ರೇಸ್ ಕೋರ್ಸ್ ಮೈದಾನಕ್ಕೆ ಸಂಪರ್ಕಿಸುವ ರಸ್ತೆಗಳಲ್ಲಿ ಯೋಗಥಾನ್‍ನಲ್ಲಿ ಭಾಗವಹಿಸುವ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲು ಈ ಸಂದರ್ಭದಲ್ಲಿ ಹಾಜರಿದ್ದ ಪೆÇಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಸ್ವಯಂ ಸೇವಕರುಗಳನ್ನು ನೇಮಿಸಿ ಅವರಿಗೆ ಸ್ಥಳದ ಮಾರ್ಗದರ್ಶನ ನೀಡುವುದು. ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಿ ಎಂದರು. ಕುಡಿಯುವ ನೀರು, ಮೊಬೈಲ್ ಶೌಚಾಲಯ, ಪಾರ್ಕಿಂಗ್, ಆಂಬುಲೆನ್ಸ್ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಯೋಗಥಾನ್‍ನಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಬಸ್ ಸೌಕರ್ಯ ಕಲ್ಪಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊoಡು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಸೂಚಿಸಿದರು.
ಈ ಸಂದoರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಲೋಕನಾಥ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷೀಕಾಂತ ರೆಡ್ಡಿ, ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ರೋಹಿತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಅಶೋಕ್ ಕುಮಾರ್ ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.