
ನವದೆಹಲಿ,ಡಿ. ೨೨-ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ೨೭ನೇ ದಿನಕ್ಕೆ ಕಾಲಿಟ್ಟಿದ್ದು ದೆಹಲಿ ಸಂಪರ್ಕಿಸಿರುವ ಎಲ್ಲ ಗಡಿಗಳನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಾಜಿಪೂರ್- ಗಾಜಿಯಾಗಾಬ್,ದೆಹಲಿ- ಮೀರತ್ ಸೇರಿದಂತೆ ವಿವಿಧ ಹೆದ್ದಾರಿಗಳನ್ನು ತಡೆದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಇದರಿಂದಾಗಿ ಹಲವು ಹೆದ್ದಾರಿಗಳಲ್ಲಿ ಸಂಚಾರ ದಟ್ಟಣೆ ಎದುರಾಗಿದೆ.
ಬೆಳಗ್ಗೆಯಿಂದಲೇ ರೈತರು ಹೆದ್ದಾರಿಗಳಲ್ಲಿ ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ.ದೆಹಲಿ ಉತ್ತರ ಪ್ರದೇಶ ಸಂಪರ್ಕ ಕಲ್ಪಿಸುವ ಹೆದ್ದಾರಿಯನ್ನು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ದೆಹಲಿಯಿಂದ ಪಂಜಾಬ ರಿಯಾನ ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲ ಗಡಿಭಾಗವನ್ನು ಸಂಪೂರ್ಣವಾಗಿ ರೈತರು ಮಾಡಿರುವುದರಿಂದ ವಾಹನ ಸಂಚಾರ ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಉತ್ತರ ಪ್ರದೇಶದ ವಿವಿಧ ನಗರಗಳ ಸಂಪರ್ಕ ಕಲ್ಪಿಸುವ ಎಲ್ಲ ಹೆದ್ದಾರಿಗಳನ್ನು ರೈತರು ಪ್ರತಿಭಟನೆ ನಡೆಸಿದ್ದಾರೆ
ಸಮಿತಿ ರಚನೆ ಪ್ರಸ್ತಾಪ:
ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಕೇಂದ್ರಸರ್ಕಾರ ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ರೈತರ ಮುಂದಿಟ್ಟಿದ್ದಾರೆ.
ಜೊತೆಗೆ ಕನಿಷ್ಠ ಬೆಂಬಲ ಬೆಲೆ ಪದ್ದತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನಿನ ಸಮಸ್ಯೆ ಬಗೆಹರಿಸುವಂತೆ ರೈತರು ಒತ್ತಾಯಿಸಿದ್ದಾರೆ.
ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಪರಸ್ಪರ ಒಮ್ಮತ ಮೂಡದೇ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಅಧಿಕೃತವಾಗಿ ಹಾಗೂ ಅನೌಪಚಾರಿಕವಾಗಿ ನಡೆಸಿದ ಮಾತುಕತೆಗಳು ವಿಫಲವಾಗಿವೆ. ರೈತರು ದೆಹಲಿ ಚಲೊ, ಹೆದ್ದಾರಿ ತಡೆ, ಟೋಲ್ ಫ್ಲಾಜಾಗಳ ಬಂದ್, ಬಿಜೆಪಿ ನಾಯಕರ ಮನೆ ಮುಂದೆ ಮುಷ್ಕರ, ಭಾರತ್ ಬಂದ್, ಉಪವಾಸ ಸತ್ಯಾಗ್ರಹಗಳೆಲ್ಲವನ್ನೂ ಶಾಂತವಾಗಿ ನಡೆಸಿದ್ದರೂ ಕೇಂದ್ರ ಸರ್ಕಾರ ತನ್ನ ಹಠಮಾರಿತನದಿಂದ ಹಿಂದೆ ಸರಿದಿಲ್ಲ. ಹಾಗಾಗಿ ಮುಂದೇನಾಗುತ್ತದೆ ಎನ್ನುವುದನ್ನು ಈಗಲೇ ಹೇಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ ೨೬ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದರು. ಇದಲ್ಲದೆ ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದರು. ಸದ್ಯ ದೆಹಲಿಯ ಗಡಿಯಲ್ಲಿರುವ ರೈತರು ತಾವಿದ್ದ ಸ್ಥಳದಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ರೈತರು ಪಂಜಾಬ್, ಹರಿಯಾಣ ಮತ್ತಿತರ ಕಡೆ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದಾರೆ. ಮೊದಲಿಗೆ ಪಂಜಾಬ್, ಹರಿಯಾಣಗಳಿಂದ ದೆಹಲಿಗೆ ಬರುವ ರಸ್ತೆಗಳನ್ನು ತಡೆದಿದ್ದ ರೈತರು ಈಗ ಉತ್ತರ ಪ್ರದೇಶ ಹಾಗೂ ರಾಜಸ್ಥಾನಗಳಿಂದ ದೆಹಲಿಗೆ ಬರುವ ದೆಹಲಿ-ಜೈಪುರ್ ರಸ್ತೆಯನ್ನೂ ಬಂದ್ ಮಾಡಿದ್ದಾರೆ. ಡಿಸೆಂಬರ್ ೧೪ರಂದು ರೈತರು ಉಪವಾಸ ಸತ್ಯಾಗ್ರಹವನ್ನೂ ನಡೆಸಿದ್ದಾರೆ.