ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆನೋಡಿಕೊಳ್ಳಿ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ

oplus_2

ಬೀದರ: ಮೇ. 18:ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಪೂರ್ವ ಮುಂಗಾರು ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ವರ್ಷ ಸೋಯಾಬಿನ ಬೀಜದ ಕೊರತೆ ಇದೆ ಎಂದು ರೈತರು ದೂರು ನೀಡಿದ್ದರು. ಆದರೆ ಬೀಜದ ದಾಸ್ತಾನು ಮಾಡಲು ಸ್ವಲ್ಪ ವಿಳಂಭವಾಯಿತು, ಪ್ರಸಕ್ತ ಸಾಲಿನಲ್ಲಿ ಜೂನ 1 ರಿಂದ ಮಳೆ ಪ್ರಾರಂಭವಾಗಿ ಜುಲೈ ತಿಂಗಳಲ್ಲಿ ಹೆಚ್ಚಿಗೆ ಮಳೆ ಬೀಳುವ ವರದಿ ಇದೆ. ಈ ಹಿಂದೆ ಬೀಜ ವಿತರಣೆ ಕೇಂದ್ರಗಳು ಮೊದಲಿದ್ದ ಸ್ಥಳದಲ್ಲಿಯೇ ಅವುಗಳನ್ನು ಮುಂದುವರೆಸಿ ರಸಗೊಬ್ಬರ ದಾಸ್ತಾನು ಮಾಡಿಕೊಂಡು ರೈತರಿಗೆ ಪ್ರಾಥಮಿಕ ಸ್ವಸಹಾಯ ಕೇಂದ್ರಗಳ ಮೂಲಕ ಸಮರ್ಪಕವಾಗಿ ವಿತರಿಸಬೇಕೆಂದು ಹೇಳಿದರು.
ನಕಲಿ ರಸಗೊಬ್ಬರಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು. ಪ್ರಸಕ್ತ ತಿಂಗಳ ಕೊನೆಯಲ್ಲಿ ಬೀಜ ವಿತರಣಾ ಪ್ರಾರಂಭಿಸಬೇಕೆಂದರು.
ಈ ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಯಾವುಲ್ಲಾ, ಜಿಲ್ಲೆಯ ಎಲ್ಲಾ ಜಿಲ್ಲಾ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ಮಂಜುಳಾ, ಕೃಷಿ ಇಲಾಖೆಯ ಉಪನಿರ್ದೇಶಕರಾದ ಸೂರ್ಯಕಾಂತ ಬಿರಾದಾರ, ಎಲ್ಲಾ ತಾಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕರುಗಳು, ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಸೇರಿದಂತೆ ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.