ರೈತರು,ಮಹಿಳೆಯರ ಆರ್ಥಿಕ ಸದೃಢತೆಗೆ ಬದ್ದ

ಕೋಲಾರ, ಜ. ೨- ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನ ನೂತನ ದಿನ ದರ್ಶಿಕೆ ಹಾಗೂ ದಿನಚರಿಯನ್ನು ಬ್ಯಾಂಕಿನ ಅಧ್ಯಕ್ಷಬ್ಯಾಲಹಳ್ಳಿ ಗೋವಿಂದಗೌಡ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ೧೦ ವರ್ಷಗಳ ಹಿಂದೆ ದಿವಾಳಿಯಾಗಿದ್ದ ಡಿಸಿಸಿ ಬ್ಯಾಂಕ್ ಎಂದು ಸದೃಢವಾಗಿದೆ, ೧೫೦೦ ಕೋಟಿಗೂ ಹೆಚ್ಚಿನ ಸಾಲವನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.
ಮಹಿಳೆಯರಿಗೆ ಭದ್ರತೆ ರಹಿತ ಶೂನ್ಯ ಬಡ್ಡಿ ಸಾಲ ವಿತರಣೆಯಲ್ಲಿ ಕೋಲಾರ ಡಿಸಿಸಿ ಬ್ಯಾಂಕ್ ದೇಶದಲ್ಲೇ ಮೊದಲನೆಯದ್ದಾಗಿದೆ ಎಂದು ತಿಳಿಸಿ, ಸಮಾಜದ ಕಟ್ಟಕಡೆಯ ಕುಟುಂಬಕ್ಕೂ ಸಾಲ ಸೌಲಭ್ಯ ಒದಗಿಡಸುವ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿರುವುದಾಗಿಯೂಈ ಮತ್ತು ಪ್ರತಿ ಕುಟುಂಬ,ಮಹಿಳೆಗೂ ಸಾಲ ಒದಗಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಮಾಡಿದ್ದು,ಪ್ರತಿ ವರ್ಷವೂ ಬ್ಯಾಂಕಿನ ಆರ್ಥಿಕಾಭಿವೃದ್ದಿಯಲ್ಲಿ ಹೊಸ ಚೈತನ್ಯ ತುಂಬುವ ಕೆಲಸ ಮಾಡುತ್ತಿದ್ದು, ಈ ಪ್ರಯತ್ನದಿಂದಾಗಿ ಬ್ಯಾಂಕಿನ ನಿಷ್ಕ್ರೀಯ ಆಸ್ತಿಯ ಮೌಲ್ಯ ಎನ್‌ಪಿಎ ಶೇ.೧ಕ್ಕೆ ತರಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ ಎಂದರು.
ಬ್ಯಾಂಕಿನ ಅಭಿವೃದ್ದಿಗೆ ನಿರಂತರವಾಗಿ ಸಹಕಾರ ನೀಡಿಕೊಂಡು ಬಂದಿರುವ ಜಿಲ್ಲೆಯ ಪತ್ರಕರ್ತರಿಗೆ ಹೊಸ ವರ್ಷದ ಶುಭಾಷಯ ಕೋರಿದ ಅವರು, ರೈತರು, ಮಹಿಳೆಯರ ಆರ್ಥಿಕ ಸದೃಢತೆಗೆ ಬ್ಯಾಂಕ್ ನಡೆಸುತ್ತಿರುವ ಪ್ರಯತ್ನಕ್ಕೆ ಸಹಕಾರ ಕೋರಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕ ನಾಗನಾಳ ಸೋಮಣ್ಣ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಶಶಿಧರ್, ಹಿರಿಯ ಪತ್ರಕರ್ತರಾದ ಎಂ.ಜಿ.ಪ್ರಭಾಕರ್, ಅನಂತರಾಮ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ರಾಜ್ಯಪರಿಷತ್ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು, ಜಿಲ್ಲಾ ಸಂಘದ ಖಜಾಂಚಿ ಎ.ಜಿ.ಸುರೇಶ್‌ಕುಮಾರ್, ಹಿರಿಯ ಸಹಕಾರಿ ಅಬ್ಬಣಿ ಶಂಕರ್, ಮಾಮಿ ಪ್ರಕಾಶ್,ಬಿಸುರೇಶ್, ಸಚ್ಚಿದಾನಂದ ಮತ್ತಿತರರು ಉಪಸ್ಥಿತರಿದ್ದರು.