ರೈತರೊಂದಿಗೆ ಕೇಂದ್ರದ ಮಾತುಕತೆ ವಿಫಲ; ಜ.4 ಮತ್ತೊಮ್ಮೆ ಸಭೆ

ನವದೆಹಲಿ, ಡಿ. 30- ಹೋರಾಟ ನಿರತ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಆರನೇ ಸುತ್ತಿನ ಮಾತುಕತೆ ವಿಫಲವಾಗಿದೆ. ಹೀಗಾಗಿ ಜನವರಿ 4ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ

ನೂತನ ಕೃಷಿ ಕಾಯ್ದೆ ಸಂಬಂಧ ಪರಿಶೀಲನಾ ಸಮಿತಿ ರಚಿಸಲಾಗುವುದು ಎನ್ನುವ ಕೇಂದ್ರ ಸರ್ಕಾರದ ಬೇಡಿಕೆಯನ್ನು ತಿರಸ್ಕರಿಸಿ ಹಿನ್ನೆಲೆಯಲ್ಲಿ ಮಾತುಕತೆ ಮತ್ತೊಮ್ಮೆ ವಿಫಲವಾಗಿದೆ

ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಕಳೆದ 33 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಆಹಾರ ಸಂಸ್ಕರಣ ಸಚಿವ ಪಿಯೂಶ್ ಗೋಯಲ್ ನೇತೃತ್ವದಲ್ಲಿ ಇಂದು ರೈತ ನಾಯಕರೊಂದಿಗೆ ಆರನೇ ಸುತ್ತಿನ ಮಾತುಕತೆ ನಡೆದಿತ್ತು.

ರೈತರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ ನರೇಂದ್ರ ಸಿಂಗ್ ತೋಮರ್ ಮತ್ತು ಸಚಿವ ಪ್ರಕಾಶ್ ಅವರು ಕಾಯ್ದೆಯ ಅನುಕೂಲಗಳ ಕುರಿತು ರೈತರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರು ಆದರೆ ರೈತರು ಕೃಷಿಗೆ ಭವಿಷ್ಯದಲ್ಲಿ ರೈತರಿಗೆ ಮಾರಕವಾಗಲಿದೆ ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಹಗ್ಗ ಜಗ್ಗಾಟ ದಿಂದಾಗಿ ಇಂದು ನಡೆದ ಮಾತುಕತೆ ವಿಫಲವಾಗಿದೆ.

ಜ.4 ಮತ್ತೊಮ್ಮೆ ಸಭೆ:

ರೈತರೊಂದಿಗೆ ನಡೆದ ಸಭೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮುಂದಿಟ್ಟಿದ್ದ ನಾಲ್ಕು ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಲಾಗಿದೆ ಆದರೆ ಇನ್ನುಳಿದ ಬೇಡಿಕೆಗಳ ಸಂಬಂಧ ಜನವರಿ ನಾಲ್ಕರಂದು ಮತ್ತೊಮ್ಮೆ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ನೂತನ ಕೃಷಿ ಕಾಯ್ದೆಗಳ ಜಾರಿಯಿಂದ ದೇಶದಲ್ಲಿ ಎಪಿಎಂಸಿ ಮಾರುಕಟ್ಟೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಮತ್ತು ವಿವಿಧ ಉತ್ಪನ್ನಗಳ ಮೇಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಮುಂದುವರೆಯಲಿದೆ ಎಂದು ಅವರು ರೈತರಿಗೆ ಭರವಸೆ ನೀಡಿದ್ದಾರೆ

ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯ ಗಡಿಭಾಗದಲ್ಲಿ ಕಳೆದ 33 ದಿನಗಳಿಂದ ಪಂಜಾಬ್ ಹರಿಯಾಣ ಉತ್ತರಪ್ರದೇಶ ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ರೈತರು ಹೋರಾಟ ನಡೆಸುತ್ತಿದ್ದಾರೆ.