ಅಥಣಿ :ಅ.4: ತುಂಬಿದ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, ತುಂಬಿ ಹರಿಯುವ ನದಿಗಳಿಗೆ ಕತಜ್ಞತಾ ಅರ್ಪಣಾ ಮನೋಭಾವದಿಂದ ಬಾಗಿನ ಅರ್ಪಿಸುವುದು ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕøತಿಯಾಗಿದೆ. ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ, ಪ್ರತಿ ವರ್ಷ ಕೆರೆಗಳು ತುಂಬುವ ಮೂಲಕ ರೈತರ ಹಾಗೂ ಜಾನುವಾರುಗಳ ಮೇಲೆ ದಯೆ ತೋರಲಿ ಎಂದು ಶಾಸಕ ಲಕ್ಷ್ಮಣ ಸವದಿ ಅವರು ಹೇಳಿದರು,
ಅವರು ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಕೆರೆಗೆ ರೈತರೊಂದಿಗೆ ಬಾಗಿನ ಅರ್ಪಿಸಿ ಮಾತನಾಡಿದರು. ಮನುಷ್ಯನ ಬದುಕಿನಲ್ಲಿ ಜೀವನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗಿದೆ. ಕರಿ ಮಸೂತಿ ಯಾತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಬಿಟ್ಟಿದ್ದರಿಂದ ಅಂತರ್ಜಲಮಟ್ಟ ವೃದ್ಧಿಯಾಗಿದ್ದು, ಈಗ ಕೆರೆ ಕಟ್ಟೆಗಳು ತುಂಬಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ಹರಿಯುತ್ತಿದೆ. ಇದರಿಂದ ರೈತರ ಮೊಗದಲ್ಲಿ ಹರ್ಷ ಮೂಡಿದೆ ಈ ವರ್ಷ ರೈತರಿಗೆ ಅನುಕೂಲವಾಗಲಿ ಒಳ್ಳೆಯ ಬೆಳೆ ಬರಲಿ ರೈತರ ಬದುಕು ಬಂಗಾರವಾಗಲಿ ಎಂದು ಹಾರೈಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಆ ಭಾಗದ ರೈತ ಬಾಂಧವರು, ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು