ರೈತರೊಡನೆ ಸೌಜನ್ಯಯುತವಾಗಿ ನಡೆದುಕೊಳ್ಳಿ: ಮಂಜುನಾಥ್

ಹನೂರು: ಜ.10: ತಾಲ್ಲೂಕಿನ ಲೊಕ್ಕನಹಳ್ಳಿ ರೈತ ಸಂಪರ್ಕ ಕಛೇರಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರು ರೈತರ ಬಗ್ಗೆ ನಿರ್ಲಕ್ಷ್ಯ ಹಾಗೂ ಬೇಜವಬ್ದಾರಿತವಾಗಿ ವರ್ತಿಸುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್.ಮಂಜುನಾಥ್ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ನೀಡಿ ರೈತರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮುಂದಾಗಬೇಕೆಂದು ತಿಳಿಸಿದರು.
ಲೊಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರಕ್ಕೆ ಇತ್ತೀಚಿಗೆ ಸಿಬ್ಬಂದಿಯಾಗಿ ನಿಯೋಜನೆಗೊಂಡಿರುವ ಚೇತನ್ ಎಂಬುವರು ರೈತರನ್ನು ಬೇಜವಬ್ದಾರಿತನವಾಗಿ ನಡೆಸಿಕೊಳ್ಳುತ್ತಿರುವ ಬಗ್ಗೆ ಪಿ.ಜಿ.ಪಾಳ್ಯ ಗ್ರಾ.ಪಂ.ಸದಸ್ಯ ಹಾಗೂ ಪರಿಸರ ಪ್ರೇಮಿ ಕೃಷ್ಣ ರೈತರೊಡನೆ ಆರೋಪಿಸಿರುವ ಹಿನ್ನಲೆಯಲ್ಲಿ ಭೇಟಿ ನೀಡಿದ ಜೆಡಿಎಸ್ ಮುಖಂಡ ಮಂಜುನಾಥ್ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರೈತರೊಡನೆ ಸೌಜನ್ಯಯುತವಾಗಿ ನಡೆದು ಕೊಳ್ಳುವುದರ ಜೊತೆಗೆ ಕೃಷಿಗೆ ಸಂಬಂಧಿಸಿದ ಅನುಕೂಲಗಳನ್ನು ರೈತರಿಗೆ ತಿಳಿಸುವ ನಿಟ್ಟಿನಲ್ಲಿ ಗಮನಹರಿಸಬೇಕೆಂದು ಸಲಹೆ ನೀಡಿದರು.
ಇದೇ ವೇಳೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ ಅವರೊಡನೆ ದೂರವಾಣಿ ಮುಖಾಂತರ ಮಾತನಾಡಿದ ಮಂಜುನಾಥ್, ಬಿಎಸ್‍ಎನ್‍ಎಲ್ ನೆಟ್ ವರ್ಕ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ರೈತರ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ ಉಪಯುಕ್ತ ಮಾಹಿತಿ ಹಾಗೂ ಸೌಜನ್ಯಯುತವಾಗಿ ವರ್ತಿಸುವಂತೆ ತಿಳಿಸಿದರು.
ಸಿಬ್ಬಂದಿಯ ದುಂಡಾವರ್ತನೆ ಸರಿಯಲ್ಲ:
ಜೆಡಿಎಸ್ ಮುಖಂಡರುಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲೇ ಗ್ರಾ.ಪಂ. ಸದಸ್ಯರನ್ನು ಬೆರಳು ತೋರಿಸುತ್ತಾ ದುಂಡಾ ವರ್ತನೆ ತೋರಿದ ಕೃಷಿ ಇಲಾಖೆ ಸಿಬ್ಬಂದಿ ಚೇತನ್ ದುಂಡಾರ್ವನೆಯನ್ನು ಕಂಡು ಜೆಡಿಎಸ್ ಮುಖಂಡರು ಜನಪ್ರತಿನಿಧಿಗಳ ವಿರುದ್ಧ ವೇ ಈ ರೀತಿಯಾಗಿದು ರ್ವತನೆ ತೋರುವ ನೀವು ಸಾಮಾನ್ಯ ರೈತರ ಜೊತೆ ಹೇಗೆ ನಡೆದುಕೊಳ್ಳುತ್ತೀರಿ ಎಂದು ಹರಿಹಾಯ್ದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ರಘುವೀರ್ ಹಾಗೂ ತಾಂತ್ರಿಕ ಅಧಿಕಾರಿ ಉಪೇಂದ್ರ ಮುಖಂಡರುಗಳನ್ನು ಸಮಾಧಾನಪಡಿಸಿ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಮುಳ್ಳೂರು ಶಿವಮಲ್ಲು, ಮಂಜೇಶ್, ಪಿ.ಜಿ.ಪಾಳ್ಯ ಸಿದ್ದರಾಜು, ರೈತರು ಇದ್ದರು.