ರೈತರ ಅನುಮತಿ ಇಲ್ಲದೆ ಸಾಲಕ್ಕೆ ಹೊಂದಾಣಿಕೆ ಮಾಡಿದರೆ ಕ್ರಮ


ಧಾರವಾಡ,ಮೇ.17: ರಾಜ್ಯ ಸರಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈಗಾಗಲೇ ಸಾಕ?À್ಟು ಬಾರಿ ಎಲ್ಲ ಬ್ಯಾಂಕ್‍ಗಳಿಗೆ ತಿಳಿಸಲಾಗಿದೆ. ಆದಾಗ್ಯೂ ಕುಂದಗೋಳ, ನವಲಗುಂದ ಸೇರಿ ಕೆಲವು ಕಡೆ ಬ್ಯಾಂಕಗಳು ಪರಿಹಾರ ಹಣವನ್ನು ರೈತರ ಸಾಲಕ್ಕೆ ಹೊಂದಿಸುತ್ತಿರುವ ಕುರಿತು ದೂರು, ವರದಿಗಳು ಬರುತ್ತಿವೆ. ಈ ವಿ?Àಯದಲ್ಲಿ ಸರಕಾರ ಮತ್ತು ಜಿಲ್ಲಾಡಳಿತ ನೀಡಿರುವ ನಿರ್ದೇಶನ ಉಲ್ಲಂಘಿಸಿದರೆ ಅಂತಹ ಬ್ಯಾಂಕಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಬ್ಯಾಂಕರ್ಸ ಪ್ರಗತಿ ಪರಿಶೀಲನಾ ಸಮಿತಿಯ ಸಹ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2024 ರ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರಕಾರ ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪಡೀತ ತಾಲೂಕುಗಳೆಂದು ಘೋ?Àಣೆ ಮಾಡಿ, ಸರಕಾರದ ನಿಯಮಾವಳಿಗಳ ಪರಿಹಾರ ಹಣ, ಇತರ ಸೌಲಭ್ಯಗಳನ್ನು ಬಿಡುಗಡೆ ಮಾಡುತ್ತಿದೆ. ಮುಖ್ಯವಾಗಿ ಈಗ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗುತ್ತಿರುವದರಿಂದ ರೈತರು ಭೂಮಿ ಉಳುಮೆ ಮಾಡಿ ಬಿತ್ತನೆಗೆ ಸಿದ್ದಗೊಳಿಸಬೇಕು, ಬೀಜ, ಗೊಬ್ಬರ ಖರೀದಿಸಬೇಕು. ಅವರ ನೆರವಿಗಾಗಿ ರಾಜ್ಯ ಸರಕಾರವು ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ನೇರವಾಗಿ ಬರಪರಿಹಾರ ಜಮೆ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರೈತರಿಗೆ ಸರಕಾರಗಳಿಂದ ನೀಡುವ ಸಹಾಯಧನ, ಸಬ್ಸಿಡಿ, ಬರಪರಿಹಾರ ಮುಂತಾದವುಗಳನ್ನು ರೈತರ ಬ್ಯಾಂಕ್ ಸಾಲದ ಖಾತೆಗೆ ಹೊಂದಾಣಿಕೆ ಮಾಡದಂತೆ ರಾಜ್ಯ ಸರಕಾರ ಮತ್ತು ರಾಜ್ಯಮಟ್ಟದ ಬ್ಯಾಂಕರ್ಸ್ ಕಮೀಟಿ ಸೂಚಿಸಿವೆ. ಈ ಕುರಿತು ಪತ್ರ ಸಹ ಹೊರಡಿಸಿವೆ. ಅದರಂತೆ ಧಾರವಾಡ ಜಿಲ್ಲಾಡಳಿತವು ಕಳೆದ ವ?ರ್À ಮತ್ತು ಈ ವ?ರ್Àದಲ್ಲಿ ಎರಡಮೂರು ಸಲ, ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಜಿಲ್ಲೆಯ ಪ್ರತಿ ಬ್ಯಾಂಕ್ ಮುಖ್ಯಸ್ಥರಿಗೆ, ವ್ಯವಸ್ಥಾಪಕರಿಗೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ರೈತರ ಸಹಮತ ಪಡೆಯದೇ ಅವರ ಬರ ಪರಿಹಾರದ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಂಡರೆ ಆಯಾ ಬ್ಯಾಂಕ್ ಮುಖ್ಯಸ್ಥರನ್ನು ಮತ್ತು ಬ್ಯಾಂಕ್ ಶಾಖಾ ವ್ಯವಸ್ಥಾಪಕರನ್ನು ಜವಾಬ್ದರರನ್ನಾಗಿಸಿ, ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕ್‍ಗಳು ರೈತರಿಗೆ ಸಹಕಾರ ನೀಡಬೇಕು. ಬರಗಾಲದಿಂದ ನೊಂದಿರುವ ರೈತರಿಗೆ ಪ್ರಸಕ್ತ ಮುಂಗಾರು ಉತ್ತಮ ಫಸಲಿನ ಭರವಸೆ ಮೂಡಿಸಿದ್ದು, ರೈತ, ಕೃಷಿ ಅಭಿವೃದ್ಧಿಯಲ್ಲಿ ಬ್ಯಾಂಕ್‍ಗಳು ಕೈ ಜೋಡಿಸಬೇಕು ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಎಲ್ಲ ಬ್ಯಾಂಕಗಳ ಮುಖ್ಯಸ್ಥರು ಮತ್ತು ಎಲ್ಲ ಬ್ಯಾಂಕ್‍ಗಳ ಶಾಖಾ ವ್ಯವಸ್ಥಾಪಕರು ಗಮನಹರಿಸಿ, ರೈತರಿಗೆ ತೊಂದರೆ ಆಗದಂತೆ ಮತ್ತು ಬರಪರಿಹಾರ ಮೊತ್ತ ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ತೆಗೆದುಕೊಳ್ಳದೆ ರೈತರ ಕೈಗೆ ನೇರವಾಗಿ ಬರ ಪರಿಹಾರ ಹಣ ಸೀಗುವಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.