ರೈತರ ಒಗ್ಗಟ್ಟಿನ ಹೋರಾಟಕ್ಕೆ ಜಯ ; ಶಾಂತ

ಬೆಂಗಳೂರು, ನ.೧೯- ಕೃಷಿ ಕಾಯ್ದೆಯನ್ನು ವಿರೋಧಿಸಿ ದೇಶದಲ್ಲಿ ರೈತರು ನಡೆಸುತ್ತಿದ್ದ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ರೈತ ಮುಖಂಡರು ಶಾಂತಕುಮಾರ್ ಹೇಳಿದ್ದಾರೆ.
ರೈತರ ಚಳುವಳಿಯನ್ನು ಹತ್ತಿಕ್ಕುವ ಮತ್ತು ಅವರ ಹೋರಾಟವನ್ನು ದಮನ ಮಾಡುವ ಸರ್ಕಾರಗಳಿಗೆ ಇದೊಂದು ಪಾಠ ಎಂದು ಅವರು ಹೇಳಿದ್ದಾರೆ.
ಕೃಷಿ ಕಾಯ್ದೆಯನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ರೈತರು ಒಗ್ಗಟ್ಟಿನ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಒಂದು ವರ್ಷದ ಬಳಿಕ ಜ್ಞಾನೋದಯವಾಗಿ ರೈತರು ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಯನ್ನು ಹಿಂದಕ್ಕೆ ಪಡೆದಿದೆ. ರೈತ ಹೋರಾಟದ ಸಮಯದಲ್ಲಿ ೬೭೫ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಅವರ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆಗಾಗಿ ಹೋರಾಟ:
ರೈತರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ರೈತ ನಾಯಕರು ಹೋರಾಟ ಮಾಡಲಿ ಎಂದು ಕೇಂದ್ರ ಸರ್ಕಾರ ಈ ಕಡೆ ಗಮನಹರಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಖಾತ್ರಿ ನೀಡುವಂತೆ ಆಗ್ರಹಿಸಿ ಕಾಯುತ್ತಿರುವಂತೆ ರೈತರು ಹೋರಾಟ ನಡೆಸುತ್ತಿದ್ದಾರೆ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.