
ವಾಷಿಂಗ್ಟನ್,ಮಾ.೧೯- ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುವ ಕುರಿತು ಭಾರತದ ಜತೆ ಚರ್ಚೆ ನಡೆಸಬೇಕೆಂದು ಅಮೆರಿಕ ಕಾರ್ಯದರ್ಶಿಗೆ ಸೆನೆಟರ್ಗಳು ಪತ್ರ ಬರೆದಿದ್ದಾರೆ.
ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಪತ್ರಕರ್ತರನ್ನು ಅಲ್ಲಿನ ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿಯ ಬಗ್ಗೆ ಭಾರತದ ನಾಯಕರೊಂದಿಗೆ ಚರ್ಚೆ ನಡೆಯುವ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಬೇಕೆಂದು ಡೆಮಾಕ್ರಟಿಕ್ ಪಕ್ಷದ ಇಬ್ಬರು ಸೆನೆಟರ್ಗಳು ಅಮೆರಿಕದ ಕಾರ್ಯದರ್ಶಿ, ಆಂಟೋನಿ ಬ್ಲಿಂಕನ್ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ವಿದೇಶಾಂಗ ವ್ಯವಹಾರ ಸಮಿತಿಯ ಅಧ್ಯಕ್ಷ ಬಾಬ್ ಮೆನೆಂಡೇಜ್ ಮತ್ತು ಸೆನೆಟ್ನ ಪ್ರಮುಖ ನಾಯಕ ಚುಕ್ಕ್ತಮರ್ ಪತ್ರ ಬರೆದಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆಡಳಿತ ಭಾರತದ ಪ್ರಧಾನಿ ನರೇಂದ್ರ ಮೋದಿ ಜತೆ ಸಮಾಲೋಚನೆ ನಡೆಸುವ ಸಂದರ್ಭದಲ್ಲಿ ಅಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ನಡೆಸಿಕೊಳ್ಳುತ್ತಿರುವ ರೀತಿಯ ಬಗ್ಗೆ ಪ್ರಸ್ತಾಪಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ರೈತರು ದೆಹಲಿಯ ಸಿಂಘುಗಡಿಯ ಕೇಂದ್ರಗಳಲ್ಲಿ ನ. ೨೮ ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ವಿಷಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.
ಸಮಸ್ಯೆ ಬಗೆಹರಿಸುವ ವಿಚಾರದಲ್ಲಿ ಪ್ರತಿಭಟನಾನಿರತ ರೈತರೊಂದಿಗೆ ಕೇಂದ್ರ ಸರ್ಕಾರ ಹಲವು ಸುತ್ತಿನ ಮಾತುಕತೆ ನಡೆಸಿದ್ದರು ಸಮಸ್ಯೆ ಕಗ್ಗಂಟಾಗಿ ಪರಿಣಮಿಸಿದೆ.