ರೈತರ ಬಾಳ್ವೆಗೆ ಆಶ್ರಯವಾದ ಬಾಳೆ

ಕೊಪ್ಪಳ, ಜೂ.08 ತಾಲೂಕಿನ ಹ್ಯಾಟಿ ಗ್ರಾಮ ಬಾಳೆ ಬೆಳೆಗೆ ಖ್ಯಾತಿ ಪಡೆದಿದ್ದು, ಇಲ್ಲಿಯ ಮಸಾರಿ ಮಣ್ಣು ಹಾಗೂ ನೀರು ಬಾಳೆ ಬೆಳೆಗೆ ಉತ್ತಮವಾಗಿದೆ.
ಈ ಗ್ರಾಮದ ವಿರುಪಾಕ್ಷಪ್ಪ ಇಲ್ಲಿನ ನೈಸರ್ಗಿಕ ಸಂಪತ್ತಿನ ಜತೆಗೆ ೨೦೨೦-೨೧ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಂಡು ಹಾಗೂ ತೋಟಗಾರಿಕೆ ಇಲಾಖೆ ಯೋಜನೆಯನ್ನು ಸದುಪಯೋಗ ಪಡೆದುಕೊಂಡು ಒಂದು ಹೆಕ್ಟರ್ ಪ್ರದೇಶದಲ್ಲಿ ಬಾಳೆ ಬೆಳೆದು, ಕೋವಿಡ್ ಸಂದಿಗ್ಧ ಸ್ಥಿತಿಯಲ್ಲೂ ಸಹ ತೋಟಗಾರಿಕೆ ಅಧಿಕಾರಿಗಳ ಸಹಾಯ ಪಡೆದು ಆರ್ಥಿಕ ಪ್ರಗತಿ ಸಾಧಿಸಿದ್ದಾರೆ. ಇವರಿಗೆ ಹೋಬಳಿ ಅಧಿಕಾರಿ ಕೃಷ್ಣ ಮೂರ್ತಿ ಪಾಟೀಲ್ ಮಾರ್ಗದರ್ಶನ ನೀಡಿದ್ದು, ಅದರಂತೆ ೨೦೨೦ರ ಜೂನ್ ತಿಂಗಳಿನಲ್ಲಿ ಬೆಂಗಳೂರಿನ ಖಾಸಗಿ ಕಂಪನಿಯಿಂದ ಬಾಳೆ ಸಸಿಗಳನ್ನು ೧೩ ರೂ. ಗಳಿಗೆ ಒಂದರಂತೆ ತಂದು ೬x೬ ಅಡಿ ಅಂತರದಲ್ಲಿ ೨ಬದಲಾವಣೆಗೊಂಡ ಪಠ್ಯ..
ಎಕರೆಯಲ್ಲಿ ೩೦೦೦ ಗಿಡಗಳನ್ನು ನಾಟಿ ಮಾಡಿದ್ದಾರೆ.
ಬಾಳೆ ನಾಟಿ ಬಗ್ಗೆ, ಸಸ್ಯ ಸಂರಕ್ಷಣೆ ಬಗ್ಗೆ ಮತ್ತು ನೀರು ಹಾಗೂ ಪೋಷಕಾಂಶಗಳ ನಿರ್ವಹಣೆ ಬಗ್ಗೆ ಹಾರ್ಟಿ ಕ್ಲಿನಿಕ್ ವಿಷಯ ತಜ್ಞರಿಂದ ಸಲಹೆ ಪಡೆದಿದ್ದಾರೆ. ಜೂನ್‌ನಲ್ಲಿ ನಾಟಿ ಮಾಡಿದ ಬಾಳೆ ಈಗ ಕೊಯ್ಲಿಗೆ ಬಂದಿದ್ದು ಸುಮಾರು ೫ ಕ್ವಿಂಟಲ್ ಕಾಯಿಗಳನ್ನು ೫ ರೂ. ಗೆ ಒಂದು ಕಿ.ಗ್ರಾಂ. ನಂತೆ ಸ್ಥಳೀಯ ಮಾರುಕಟ್ಟೆಗೆ ಮಾರಾಟ ಮಾಡಿದ್ದಾರೆ.ಲಾಕ್‌ಡೌನ್‌ನಿಂದಾಗಿ ಬೆಲೆ ಕಡಿಮೆ ಆಗಿ ಹಾಗೂ ಖರೀದಿದಾರರೇ ಇಲ್ಲದ ಸಮಯದಲ್ಲಿ ತೋಟಗಾರಿಕೆ ಇಲಾಖೆ ಮಧ್ಯ ಪ್ರವೇಶಿಸಿ, ಸ್ಥಳೀಯವಾಗಿ ಮಾರುಕಟ್ಟೆ ಕಲ್ಪಿಸಿಕೊಟ್ಟಿದ್ದಾರೆ. ಮುಂದಿನ ದಿನಮಾನಗಳಲ್ಲಿ ಬೇರೆ ಜಿಲ್ಲೆಗಳಿಗೆ ಕಳುಹಿಸಲಾಗುವುದು. ಸದ್ಯದ ಪರಿಸ್ಥಿತಿಯಲ್ಲಿ ಮಾರಾಟ ಮಾಡುವುದೊಂದೇ ಸವಾಲಾಗಿದೆ, ಮಾರಾಟವಾಗದಿದ್ದಲ್ಲಿ ಹಣ್ಣುಗಳು ಹಾಳಾಗುತ್ತವೆ,
ಮೊದಲೇ ಗಾಳಿಯಿಂದಾಗಿ ನೂರಾರು ಗಿಡಗಳು ಬಿದ್ದು ನಷ್ಟವಾಗಿವೆ, ಈಗ ಮತ್ತಷ್ಟು ನಷ್ಟವಾಗುವುದು ಬೇಡ ಎಂದು ಅಧಿಕಾರಿಗಳ ಸಲಹೆ ನೀಡಿದ್ದಾರೆಬದಲಾವಣೆಗೊಂಡ ಪಠ್ಯ..
ತೋಟಗಾರಿಕೆ ಅಧಿಕಾರಿಗಳ ಸಲಹೆಯಂತೆ ಬೆಳೆದ ಬಾಳೆ ಉತ್ತಮವಾಗಿದೆ, ಮುಂದಿನ ದಿನಗಳಲ್ಲಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ ಎನ್ನುತ್ತಾರೆ
ವೀರುಪಾಕ್ಷಪ್ಪ.ಇಲಾಖೆಯ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಅಧಿಕಾರಿಗಳ ಸಲಹೆ ಪಡೆದ ವಿರುಪಾಕ್ಷ ಅವರು ಉತ್ತಮ ಬೆಳೆ ಬೆಳೆದಿದ್ದಾರೆ. ಕೋವಿಡ್-೧೯ ಲಾಕ್‌ಡೌನ್‌ನಿಂದಾಗಿ ಇವರಿಗೆ ಮಾರುಕಟ್ಟೆ ತೊಂದರೆ ಆಗಿತ್ತು, ಸದ್ಯ ಕಡಿಮೆ ದರ ಇದ್ದರೂ ಸ್ಥಳೀಯ ವ್ಯಾಪಾರಸ್ಥರು ತಾವೇ ಕೊಯ್ಲು ಮಾಡಿ ಕಾಯಿಗಳನ್ನು ಒಯ್ಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ದರ ಸಿಗಬಹುದು. ರೈತರು ಎದೆಗುಂದಬಾರದು. ತೋಟಗಾರಿಕೆ ಇಲಾಖೆ ಸದಾ ರೈತರ ನೆರವಿಗೆ ಇರುತ್ತದೆ ಎಂದು ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರಾದ (ಹಿ.ಸ.ತೋ.ನಿ) ಜಗನ್ನಾಥರೆಡ್ಡಿ ಹೇಳುತ್ತಾರೆ.ಹೆಚ್ಚಿನ ಮಾಹಿತಿಗಾಗಿ ವಿರುಪಾಕ್ಷಪ್ಪ.ವಾಮನ ಮೂರ್ತಿ ವಿಷಯ ತಜ್ಞರು-ಮೊಬೈಲ್ ಸಂಖ್ಯೆ ೯೪೮೨೬೭೨೦೩೯, ಹಿ.ಸ.ತೋ.ನಿ (ಜಿಪಂ) ಜಗನ್ನಾಥರೆಡ್ಡಿ, ಕೊಪ್ಪಳ, ಮೊಬೈಲ್ ಸಂಖ್ಯೆ ೯೯೪೫೯೨೪೮೯೮ ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.