ರೈತರ ಬೆಳೆ ಹಾನಿಗೆ ತಕ್ಷಣ ಪರಿಹಾರಕ್ಕೆ ಆಗ್ರಹ

ರೈತರ ಬೆಳೆ ಹಾನಿಗೆ ತಕ್ಷಣ ಪರಿಹಾರಕ್ಕೆ ಆಗ್ರಹ

ಸಂಜೆವಾಣಿ ವಾರ್ತೆ

ಚಿತ್ತಾಪುರ: ಸೆ.25:ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ಅಪಾರ ಪ್ರಮಾಣದಲ್ಲಿ ನಷ್ಟವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನ ನಡೆಸುವುದು ತುಂಬಾ ಕಷ್ಟಕರವಾಗಿದೆ ಎಂದು ನವ ಕರ್ನಾಟಕ ರೈತ ಸಂಘ ತಾಲೂಕು ಘಟಕ ಆಗ್ರಹಿಸಿ ಗ್ರೇಡ್ 2 ತಹಸೀಲ್ದಾರ ರವೀಂದ್ರ ದಾಮಾ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಸಂಘದ ತಾಲೂಕು ಅಧ್ಯಕ್ಷ ರವಿ ಗುತ್ತೇದಾರ್ ಮಾತನಾಡಿ ಲಾಕ್‍ಡೌನ್‍ನ ಸಂಕಷ್ಟದ ಸಮಯದಲ್ಲಿ ರೈತರ ಬದುಕು ತುಂಬಾ ಕಷ್ಟಕರವಾಗಿ ಜೀವನ ನಡೆಸುವುದು ಗಂಭೀರವಾಗಿದೆ ಹೀಗಾಗಿ ರೈತರ ಬೆಳೆ ಹಾನಿಗೆ ಪರಿಹಾರ ಹಾಗೂ ರೈತರ ಸಾಲ ಮನ್ನಾ ಮಾಡಿ. ಕೂಡಲೇ ರೈತರ ಖಾತೆಗೆ ಪರಿಹಾರ ಹಣ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉಸನಯ್ಯ ಗುತ್ತೇದಾರ್, ಚಂದ್ರಶೇಖರ್ ಕಮರವಾಡಿ, ಎಂಡಿ ಗೌಸ್, ವಿಶ್ವನಾಥ್ ಹೊಟ್ಟಿ, ನರಸಯ್ಯ ಗುತ್ತೇದಾರ್, ನಾಗೇಶ್ ಸೇರಿದಂತೆ ಇತರರಿದ್ದರು.