ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಚಾಲನೆ

ಕೊಟ್ಟೂರು ಸೆ 06 : ಕೃಷಿ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ಹಾಗೂ ಉನ್ನತ ಶಿಕ್ಷಣಕ್ಕಾಗಿ ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ನೂತನ ಶಿಷ್ಯವೇತನ ಲೋಕಾರ್ಪಣೆ ನೇರಪ್ರಸಾರ ಕಾರ್ಯಕ್ರಮವನ್ನು ಗುರುವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ ರೈತರು ಮತ್ತು ಅಧಿಕಾರಿಗಳು ವೀಕ್ಷಿಸಿದರು.
ಈ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಕೃಷಿ ಸಚಿವ ಬಿ.ಸಿ ಪಾಟೀಲ್ ಅನೇಕ ಸಚಿವರು ರೈತ ಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ನೇರ ಪ್ರಸಾದ ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ಅಧಿಕಾರಿ ಹಾಲಪ್ಪ ಕೃಷಿ ಅಧಿಕಾರಿ ಶಾಮ್ ಸುಂದರ್ ಕೂಡ್ಲಿಗಿ ತಾಲೂಕು ತಾಂತ್ರಿಕ ಕೃಷಿ ಅಧಿಕಾರಿ ನೀಲಾ ನಾಯಕ್ ಸಿಬ್ಬಂದಿಗಳಾದ ತಿಮ್ಮಪ್ಪ ಕೊಟ್ರೇಶ್ ಸುರೇಶ್ ಆಶಾ ಹಾಗೂ ರೈತರು ಪಾಲ್ಗೊಂಡಿದ್ದರು.