ರೈತರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ

ಹೊಸಪೇಟೆ ಮಾ26: ಕೇಂದ್ರ ಸರ್ಕಾರದ ರೈತವಿರೋಧಿ ಕೃಷಿ ನೀತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕುತ್ತೀರುವ ಕಾರ್ಯದಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ಅನೇಕ ಜನಪರ ಸಂಘಟನೆಗಳು ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟಸಿದರು.
ಈ ಕುರಿತು ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಂಘಟನೆಯ ಪದಾಧಿಕಾರಿಗಳು ಕೇಂದ್ರ ಸರ್ಕಾರದ 4 ಕೃಷಿ ತಿದ್ದುಪಡಿ ಮಸೂದೆಯನ್ನು ಖಂಡಿಸಿ ಈ ಎಲ್ಲಾ ಮಸೂದೆಗಳು ಕೃಷಿಕರ ವಿರೋಧಿಯಾಗಿವೆ, ಅಲ್ಲದೆ ತಮ್ಮ ಮೂಲಭೂತವಾದ ಹಕ್ಕುಗಳನ್ನು ಪಡೆಯಲು ಪ್ರತಿಯೊಬ್ಬರಿಗೂ ಇರುವಂತೆ ರೈತರಿಗೂ ಹಕ್ಕಿದ್ದರೂ ಅದನ್ನು ತಡೆಯಲು ಕೇಂದ್ರ ಸರ್ಕಾರ ದೌರ್ಜನ್ಯವನ್ನು ಮಾಡುತ್ತಿದೆ, ಮುಖಂಡರಾದ ರಾಕೇಶ್ ಟಿಕಾಯತ್ ಮೇಲೆ ಹಾಕಿರುವ ಎಫ್‍ಐಆರ್ ನ್ನು ಹಿಂಪಡೆಯಬೇಕು ಎಂದು ರಾಷ್ಟ್ರವ್ಯಾಪಿ ಬಂದ್ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಪ್ರಾಂತ ರೈತಸಂಘಗಳು ಸ್ಥಳೀಯ ರೈತಪರ ಸಂಘಟನೆಯಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದವು.
ಮುಖಂಡರಾದ ಜೆ.ಕಾರ್ತಿಕ್, ಜಡಿಯಪ್ಪ, ಜಂಬಯ್ಯನಾಯಕ್, ಕೆ.ನಾಗರತ್ನಾ, ಯಲ್ಲಾಲಿಂಗ, ಸಂತೋಷ ಸೇರಿದಂತೆ ರೈತಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.