ರೈತರ ಹೋರಾಟ ಬೆಂಬಲಿಸಿ ಜ.1ರಂದು ಸಂಕಲ್ಪ ದಿನ

ದಾವಣಗೆರೆ,ಡಿ.30: ದಹಲಿ ರೈತರ ಹೋರಾಟ ಬೆಂಬಲಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ನೇತೃತ್ವದಲ್ಲಿ ದೇಶಾದ್ಯಂತ ಜ.1ರಂದು ಸಂಕಲ್ಪ ದಿನ ಆಚರಿಸಲಾಗುವುದು ಎಂದು ಸಂಘಟನೆಯ ರಾಜ್ಯಾಧ್ಯಕ್ಷೆ ಅಪರ್ಣ ಬಿ.ಆರ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಮೊದಲಿನಿಂದಲೂ ನಮ್ಮ ಸಂಘಟನೆ ಹೋರಾಟ ಮಾಡಿಕೊಂಡು ಬಂದಿದ್ದು, ಮುಂದೆಯೂ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಈ ನಿಟ್ಟಿನಲ್ಲಿ ಜ.1ರಂದು ಸಂಕಲ್ಪ ದಿನ ಆಯೋಜಿಸಲಾಗಿದೆ ಎಂದು ಹೇಳಿದರು.ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಗೆ ಸಂಬAಧಿಸಿದ ಮೂರು ಕರಾಳ ಕಾಯ್ದೆ ರದ್ದು ಗೊಳಿಸುವಂತೆ ಒತ್ತಾಯಿಸಿ ಕಳೆದ 34 ದಿನಗಳಿಂದ  ರೈತರು ದೆಹಲಿಯಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ರೈತರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗದಿರುವುದು ಅತ್ಯಂತ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಸಿದರು.ಈ ಹೋರಾಟದಲ್ಲಿ ನೂರಾರು ರೈತ ಸಂಘಟನೆಗಳು ಪಾಲ್ಗೊಂಡಿವೆ. ಆದರೆ, ಪ್ರಭುತ್ವ ಪಂಜಾಬ್ ಮತ್ತು ಹರಿಯಾಣ ರೈತರು ಮಾತ್ರ ಈ ಹೋರಾಟ ಮಾಡುತ್ತಿದ್ದಾರೆಂಬುದಾಗಿ ಹೇಳುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಈ ಮೂರು ಕೃಷಿ ಕಾಯ್ದೆಗಳು ಜಾರಿಯಾದರೆ, ರೈತರ ಬದುಕೇ ಅಲ್ಲೋಲ ಕಲ್ಲೋಲವಾಗಲಿದೆ. ಆದ್ದರಿಂದ ಸರ್ಕಾರ ಈ ಮೂರು ಕಾಯ್ದೆಗಳನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷೆ ಜ್ಯೋತಿ ಕುಕ್ಕುವಾಡ, ಜಿಲ್ಲಾ ಕಾರ್ಯದರ್ಶಿ ಭಾರತಿ, ಮಮತಾ ಹಾಜರಿದ್ದರು.