ರೈತ‌ ವಿರೋದಿ ಮಸೂದೆ ತಿರಸ್ಕರಿಸಲು ರಾಷ್ಟ್ರಪತಿಗೆ ಅಕಾಲಿದಳ‌ ಮನವಿ

ನವದೆಹಲಿ, ಸೆ.21- ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿರುವ ಕೃಷಿ ಸಂಬಂಧಿಸಿದ ಮಸೂದೆ ರೈತರ ವಿರೋಧಿಯಾಗಿದ್ದು ಯಾವುದೇ ಕಾರಣಕ್ಕೂ ಅಂಕಿತ ಹಾಕದಂತೆ ಶಿರೋಮಣಿ ಅಕಾಲಿದಳ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಇಂದಿಲ್ಲಿ ಮನವಿ ಮಾಡಿದೆ.

ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ ಬೀರ್ ಸಿಂಗ್ ಬಾದಲ್ ನೇತೃತ್ವದ ನಿಯೋಗ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ರಾಜ್ಯಸಭೆಯಲ್ಲಿ ಬಲವಂತವಾಗಿ ಮಸೂದೆಗೆ ಅಂಗೀಕಾರ ಪಡೆಯಲಾಗಿದೆ. ಯಾವುದೇ ಕಾರಣಕ್ಕೂ ತಾವು ಒಪ್ಪಿಗೆ ನೀಡದಂತೆ ಮನವಿಯಲ್ಲಿ ತಿಳಿಸಲಾಗಿದೆ

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವ ಕೃಷಿ ಸಂಬಂಧಿಸಿದ ಮೂರು ಮಸೂದೆಗಳನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕೇಂದ್ರ ಸರ್ಕಾರ ಕಳುಹಿಸಿಕೊಟ್ಟಿದೆ.

ಈ ನಡುವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ಅಕಾಲಿ ದಳದ ಮುಖ್ಯಸ್ಥ ಸುಖ್ ಬೀರ್ ಸಿಂಗ್ ಬಾದಲ್ ಅವರು ರೈತ ವಿರೋಧಿಯಾದ ಮಸೂದೆಗೆ ಅಂಕಿತ ಹಾಕಬೇಡಿ ಇದರಿಂದ ರೈತರಿಗೆ ಸಮಸ್ಯೆಯಾಗಲಿದೆ ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ ಬೀರ್ ಸಿಂಗ್ ಬಾದಲ್ ಅವರು, ಕೃಷಿ ಸಂಬಂಧಿಸಿದ ಮಸೂದೆಗಳು ರೈತ ವಿರೋಧಿಯಾಗಿದ್ದು ರಾಜ್ಯಸಭೆಯಲ್ಲಿ ಬಲವಂತ ದಲ್ಲಿ ಒಪ್ಪಿಗೆ ಪಡೆಯಲಾಗಿದೆ ಮತ್ತೆ ಮರಳಿ ಸಂಸತ್ತಿಗೆ ಬರುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಉತ್ತೇಜನ ಮತ್ತು ಸೌಲಭ್ಯ ಮಸೂದೆ 2020, ರೈತರ ಸಬಲೀಕರಣ ಮತ್ತು ರಕ್ಷಣೆ ಬೆಲೆ ಸಂಬಂಧಿಸಿದ ಖಾತರಿ ಒಪ್ಪಂದ ಮತ್ತು ಸೇವಾ ಮಸೂದೆ 2020 ಹಿಂಪಡೆಯುವ ತನಕ ಕೇಂದ್ರ ಸರ್ಕಾರದ ಜೊತೆ ಯಾವುದೇ ಮಾತುಕತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ

ಮುಂಬೈಯ ಸದನಗಳಲ್ಲಿ ಕೃಷಿ ಸಂಬಂಧಿಸಿದ ಮಸೂದೆಗೆ ಅಂಗೀಕಾರ ಪಡೆದಿರುವುದು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ದಿನ ಎಂದು ಅವರು ಹೇಳಿದ್ದಾರೆ

ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ಮಸೂದೆಗೆ ಅಂಕಿತ ಹಾಕಬೇಡಿ ಇದರಿಂದಾಗಿ ರೈತರು ಕಾರ್ಮಿಕರು ಕೆಲಸ ಮಾಡುವ ಹಮಾಲಿಗಳು ,ದಲಿತರು ಸೇರಿದಂತೆ ಅನೇಕರಿಗೆ ತೊಂದರೆಯಾಗಲಿದೆ ಎನ್ನುವುದನ್ನು ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

ರಾಜೀನಾಮೆ:
ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಶಿರೋಮಣಿ ಅಕಾಲಿದಳದ ಸಂಸದೆ ಹಸಿಮೃತ್ ಕೌರ್ ಬದಲ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಕಳೆದವಾರ ರಾಜೀನಾಮೆ ಸಲ್ಲಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಶಿರೋಮಣಿ ಅಕಾಲಿದಳ ಎನ್ ಡಿಎ. ಭಾಗವಾಗಿ ಮುಂದುವರೆದಿದೆ.

12 ಪಕ್ಷಗಳಿಂದ ಭೇಟಿಗೆ ಕಾಲಾವಕಾಶ

ಶಿರೋಮಣಿ ಅಕಾಲಿದಳದ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗೆ ಅಂಕಿತ ಹಾಕದಂತೆ ಮನವಿ ಮಾಡಿರುವ ನಡುವೆಯೇ ವಿರೋಧಪಕ್ಷಗಳ 12 ರಾಜಕೀಯ ಪಕ್ಷಗಳು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಲು ಸಮಯವಕಾಶ ಕೇಳಿದ್ದಾರೆ.

ಕಾಂಗ್ರೆಸ್, ಎಡಪಕ್ಷಗಳು, ಎನ್ ಸಿಪಿ, ಡಿಎಂಕೆ, ಸಮಾಜವಾದಿ, ಪಕ್ಷ ತೃಣಮೂಲ ಕಾಂಗ್ರೆಸ್ ಆರ್ ಜೆಡಿ ಸೇರಿದಂತೆ ಒಟ್ಟು 12 ಪಕ್ಷಗಳು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಿದೆ