
ಔರಾದ : ಆ.2:ಮಳೆ ಹೆಚ್ಚಾಗಿ ಬೆಳೆ ಹಾನಿಯಾಗಿದೆ ಎಂದು ಆತಂಕವಾಗಿ ತಾಲೂಕಿನ ಹೆಡಗಾಪೂರ ಗ್ರಾಮದ ರೈತ ಗುರುಲಿಂಗಯ್ಯ ಶಿವಕುಮಾರಯ್ಯ (60) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ರೈತ ಗುರುಲಿಂಗಯ್ಯ ಅವರು ಕೆಲ ಬ್ಯಾಂಕ್ ಗಳಲ್ಲಿ ಸಾಲ ಮಾಡಿದ್ದಾರೆ. ತನ್ನ ನಾಲ್ಕು ಎಕರೆ ಜಮೀನಿನಲ್ಲಿ ಉಳುಮೆ ಮಾಡಿದ್ದಾರೆ ಮಳೆ ಹೆಚ್ಚಾಗಿ ಬೆಳೆ ಹಾನಿಯಾಗಿದೆ ಆತಂಕಗೊಂಡು ಮನೆ ಹಿತ್ತಲಿನ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಹೆಂಡತಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಅವರನ್ನು ಅಗಲಿದ್ದಾರೆ ಈ ಕುರಿತು ಠಾಣಾ ಕುಶನೂರ ಪೆÇೀಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.