ರೈತ-ಕೂಲಿಕಾರ, ಕಾರ್ಮಿಕರ ಪ್ರತಿಭಟನೆ

ಕಲಬುರಗಿ,ಫೆ.16-ಬೆಲೆ ಏರಿಕೆ ನಿಯಂತ್ರಿಸಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತು ರೈತರ ಮೇಲಿನ ದೌರ್ಜನ್ಯ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ, ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ವಿವಿಧ ರೈತ, ಕಾರ್ಮಿಕ ಸಂಘಟನೆಗಳು ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದವು.
ಪ್ರತಿಭಟನಾ ಮೆರವಣಿಗೆ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ಶರಣಬಸಪ್ಪ ಮಮಶೆಟ್ಟಿ, ಎಂ.ಬಿ.ಸಜ್ಜನ್, ಮೌಲಾ ಮುಲ್ಲಾ, ನಾಗರಾಜ ಭಂಗೊರ, ಮಲ್ಲಿಕಾರ್ಜುನ ಪಾಟೀಲ, ಭೀಮಾಶಂಕರ ಮಾಡಿಯಾಳ, ಮೋಬಿನ್, ಗೌರಮ್ಮ ಪಾಟೀಲ, ಪದ್ಮಿನಿ ಕಿರಣಗಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.