ರೈತ ಪರವಾದ ಜೆಡಿಎಸ್ ಪಕ್ಷ ಬಲವರ್ಧನೆಗೆ ಶ್ರಮಿಸಿ:ಬಾಲರಾಜ್ ಗುತ್ತೇದಾರ

ಸೇಡಂ,ಜ,18 : ರೈತ ಪರವಾದ ಹಲವಾರು ಯೋಜನೆಗಳನ್ನು ಜಾರಿಗೆ ತಂದ ಜೆಡಿಎಸ್ ಪಕ್ಷದ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಜೆಡಿಎಸ್ ಅಭ್ಯರ್ಥಿ ಬಾಲರಾಜ್ ಗುತ್ತೇದಾರ ಹೇಳಿದರು.
ಪಟ್ಟಣದ ಬ್ರಾಹ್ಮಣ ಗಲಿ ಬಡಾವಣೆಯಲ್ಲಿ ನೂರಾರು ಮಹಿಳೆಯರು ವಿವಿಧ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಮಾಡಿಕೊಂಡು ಮಾತನಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಯವರ ಜನಪರ ಯೋಜನೆಗಳು ಜೆಡಿಎಸ್ ಪಕ್ಷಕ್ಕೆ ದೊಡ್ಡ ಕೊಡುಗೆಯಾಗಿದೆ. ಮುಂಬರುವ ದಿನಗಳಲ್ಲಿ ಇಲ್ಲಿನ
ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ಕೊಡಬೇಕು. ನೀರಾವರಿ ಯೋಜನೆಗಳು ಅನುಷ್ಠಾನಕ್ಕೆ ತರಬೇಕು. ಮತಕ್ಷೇತ್ರದ ಜನತೆಗೆ
ನ್ಯಾಯಯುತವಾಗಿ ಏನು ಸೇರಬೇಕೋ ಅದನ್ನು ಕೊಡಿಸಲು ತಾವು ಸದಾ ಹೋರಾಟಕ್ಕೆ ಸಿದ್ಧರಿರುವುದಾಗಿ ಹೇಳಿದರು.
ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಸ್ತ್ರಿ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ ಆದಕಾರಣ ಪ್ರತಿಯೊಬ್ಬರು ಜೆಡಿಎಸ್ ಪಕ್ಷಕ್ಕೆ ಬೆಂಬಲಿಸುವ ಮೂಲಕ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಮನವಿ ಮಾಡಿದ್ದರು.

ಈ ಸಂದರ್ಭದಲ್ಲಿ ಪಲ್ಲವಿ ಬಾಲರಾಜ್ ಗುತ್ತೇದಾರ, ಅಂಕೀತಕುಮಾರ ಜೋಶಿ,
ಶಂಭುಲಿಂಗ ನಾಟೇಕರ್. ಪ್ರವೀಣ ಗುತ್ತೇದಾರ್ ,ರಮೇಶ ನೀಲಂಗಿ, ಅಮೀನರೆಡ್ಡಿ, ಮಹೇಶ ನಿಲಂಗಿ, ಹರೀಶ ರೆಡ್ಡಿ, ,ಆನಂದ ಜೋಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.