ರೈತ ವಿರೋಧಿ ಕಾಯ್ದೆ ಹಿಂತೆಗೆದುಕೊಳ್ಳಲು ಆಗ್ರಹ

ಚಿತ್ರದುರ್ಗ.ಜ.೪; : ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ಕರಾಳ ರೈತ ವಿರೋಧಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ರೈತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಐಕ್ಯ ಹೋರಾಟದವರು ಇಂದು ಜನ ಜಾಗೃತಿ ಜಾಥಾವನ್ನು ನಡೆಸಿದರು.ಕೇಂದ್ರದ ಬಿಜೆಪಿ ಸರ್ಕಾರ ರೈತರ ವಿರುದ್ದ ನಿರಂಕುಶವಾಗಿ ಎಪಿಎಂಸಿ ತಿದ್ದುಪಡಿ ಕಾಯ್ದೆ 2020, ಬೆಲೆ ಭರವಸೆ ಕೃಷಿ ಸಂಗೀತ ಸೇವೆಗಳ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ, ವಿದ್ಯುತ್ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು, ಈ ಕಾಯ್ದೆಗಳಿಂದ ಅಗತ್ಯ ವಸ್ತುಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಮಾಡುವುದಕ್ಕೆ ಅವಕಾಶ ನೀಡುತ್ತದೆ. ಅಲ್ಲದೆ ಇದು ಸರ್ಕಾರಿ ಕೃಷಿ ಮಂಡಿಗಳನ್ನು ನಾಶ ಮಾಡುತ್ತದೆ. ಉದ್ಯಮಿಗಳಿಗೆ ಖಾಸಗಿ ಮಂಡಿಗಳನ್ನು ತೆರೆಯಲು ಅವಕಾಶ ಮಾಡಿಕೊಡುತ್ತದೆ. ಇದರಿಂದ ಕಾರ್ಪೊರೇಟ್ ಕಂಪನಿಗಳ, ಬಹುರಾಷ್ಟ್ರೀಯ ಕಂಪನಿಗಳ ಮೋಸ ಶೋಷಣೆಗೆ ರೈತರು ಬಲಿಯಾಗುತ್ತಾರೆ ಎಂದು ಜಾಥಾದ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು ದೂರಿದರು.ಗುತ್ತಿಗೆ ಕೃಷಿಯ ಹೆಸರಿನಲ್ಲಿ ರೈತರಿಂದ ಅವರ ಜೀವನೋಪಾಯದ ಏಕೈಕ ಸಾಧನವಾಗಿರುವ ಕೃಷಿ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಆದ್ದರಿಂದ ಕೂಡಲೇ ರೈತರ ಮರಣ ಶಾಸನವಾಗಿರುವ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.ಜಾಥಾದಲ್ಲಿ ನುಲೆನೂರು ಶಂಕರಪ್ಪ, ಯಾದವರೆಡ್ಡಿ, ಬಿ.ಕರ.ರಹಮತ್ ಉಲ್ಲಾ ಹರೀಶ್, ನಾಗರಾಜಪ್ಪ ಸೇರಿದಂತೆ ಇತರರು ಭಾಗಹಿಸಿದ್ದರು.————-