ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಗಂಗಾವತಿ ಜ.7: ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾನೂನು ತಕ್ಷಣ ರದ್ದುಗೊಳಿಸುವಂತೆ ಆಗ್ರಹಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಇಲ್ಲಿನ ಶ್ರೀ ಕೃಷ್ಣದೇವರಾಯ ಭವನ ಹತ್ತಿರ ಬುಧವಾರ ಪ್ರತಿಭಟನೆ ನಡೆಸಿದರು.
ಆಶಾ ಕಾರ್ಯಕರ್ತೆಯರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಮಾತನಾಡಿ, ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಶೀಘ್ರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರ ಜಿಲ್ಲಾ ಅಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯ, ತಾಲೂಕು ಅಧ್ಯಕ್ಷೆ ಶಾರದಾ, ಲಾಲಭೀ, ವಿಜಯಲಕ್ಷ್ಮೀ, ರಾಜೇಶ್ವರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.