ರೈತ ಸಂಘದ ಪದಾಧಿಕಾರಿಗಳ ಆಯ್ಕೆ

ಹುಣಸಗಿ,ನ.5-ಇಲ್ಲಿನ ಕಾಳಿಕಾದೇವಿ ಮಂದಿರದಲ್ಲಿ ಆಯೋಜಿಸಲಾದ ಕರ್ನಾಟಕ ರಾಜ್ಯ ರೈತ ಸಂಘದ (ಹಸಿರು ಸೇನೆ)ಯ ನೂತನ ಪದಾಧಿಕಾರಿಗಳ ಆಯ್ಕೆಯ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷ ರಂಗನಾಥಗೌಡ ಮಾತನಾಡಿದರು.
ತಾಲೂಕಿನ ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವ ನಿಟ್ಟಿನಲ್ಲಿ ಈ ಒಂದು ರೈತ ಸಂಘವನ್ನು ನೂತನವಾಗಿ ಹುಣಸಗಿ ತಾಲೂಕಿನಲ್ಲಿ ಅಸ್ತಿತ್ವಕ್ಕೆ ತರಲಾಗುತ್ತಿದ್ದು ಮುಂದಿನ ದಿನಮಾನಗಳಲ್ಲಿ ತಾಲೂಕಿನ ಎಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ತಾಲೂಕಿನಲ್ಲಿ ರೈತ ಸಂಘವನ್ನು ಮುನ್ನಡೆಸಿಕೊಂಡು ಹೋಗಲಾಗುವುದು ಎಂದು ಹೇಳಿದರು.
ನೂತನ ತಾಲೂಕಿನ ಪದಾಧಿಕಾರಿಗಳ ಆಯ್ಕೆ:
ಹುಣಸಗಿ ತಾಲೂಕು ಅಧ್ಯಕ್ಷರಾಗಿ ಡಾ.ನಂದಕುಮಾರ ಪೂಜಾರಿ, ಗೌರವಾಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಮರೆಪ್ಪಗೌಡ ಪೆÇೀಲಿಸ್ ಪಾಟಿಲ್ ಮಲ್ಲಿಕಾರ್ಜುನ ದೇಸಾಯಿ ಅವರುಗಳನ್ನು ಆಯ್ಕೆ ಮಾಡಲಾಗಿದೆ.
ತಾಲೂಕಿನ ರೈತ ಸಂಘದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಸಂದರ್ಭದಲ್ಲಿ ಮಾತನಾಡಿದ ಡಾ:ನಂದಕುಮಾರ ಪೂಜಾರಿ ಅವರು ಇಂದು ರಾಜ್ಯ, ಜಿಲ್ಲೆ, ಹಾಗೂ ತಾಲೂಕು ಕಛೇರಿಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ರೈತರಿಗೆ ಅನ್ಯಾಯವಾಗುತ್ತಾ ಬಂದಿದೆ ಹೀಗಾಗಿ ತಾಲೂಕಿನಲ್ಲಿ ನಿರಂತರವಾಗಿ ರೈತ ವರ್ಗಕ್ಕೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟುವ ಮೂಲಕ ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮಾಡೋಣ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಸಾಹುಕಾರ, ಶಹಾಪೂರ ತಾಲೂಕಿನ ಅಧ್ಯಕ್ಷ ಹಂಪಣ್ಣ ಸಾಹುಕಾರ, ಪ್ರಧಾನ ಕಾರ್ಯದರ್ಶಿ ಭೀಮರಾಯ ಸೇರಿದಂತೆ ಇತರೆ ರೈತ ಮುಖಂಡರು ಇದ್ದರು.