ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್‌ ಭೇಟಿ

ಕೊಟ್ಟೂರು ಜೂ 1:ಇಲ್ಲಿನ ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್‌ ಭೇಟಿ ನೀಡಿ ಪರಿಶೀಲಿಸಿದರು. ರೈತ ಸಂಪರ್ಕ ಕೇಂದ್ರದ ಸ್ಟೋರೇಜ್ಗೆ ಭೇಟಿ ನೀಡಿ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳ ಮಾರಾಟ, ದಾಸ್ತಾನುಗಳ ಮಾಹಿತಿ ಪಡೆದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಂತರ ಮಾತನಾಡಿದ ಅವರು, ಅಗತ್ಯ ಬಿತ್ತನೆ ಬೀಜ ಗೊಬ್ಬರ ಲಭ್ಯವಿದ್ದು ರೈತರು ಸದುಪಯೋಗ ಪಡೆದುಕೊಳ್ಳಬೇಕಿದೆ, ಕೋವಿಡ್ ನಿಯಮ ಪಾಲಿಸುವ ನಿಟ್ಟಿನಲ್ಲಿ ಬ್ಯಾರಿಕೇಡ್ ಹಾಗೂ ಸಾಮಾಜಿಕ‌ ಅಂತರ ಕಾಪಡುವುದಕ್ಕಾಗಿ ಮಾರ್ಕ್ ಮಾಡುವಂತೆ ಸಿಬ್ಬಂದಿಗೆ ತಿಳಿಸಿದರು,
ಕೋಗಳಿಯ ರೈತ ಸಂಪರ್ಕ ಕೇಂದ್ರದಲ್ಲಿಯು ಸಹ ಬ್ಯಾರಿಕೇಡ್ ಹಾಗೂ ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ, ಸಹಾಯಕ ಕೃಷಿ ನಿರ್ದೇಶಕರಾದ ವಾಮದೇವ್ ಕೊಳ್ಳಿ, ಶ್ಯಾಮ್ ಸುಂದರ್, ಸಿಬ್ಬಂದಿ ತಿಮ್ಮಪ್ಪ ಇದ್ದರು.