ರೈತ ಸಮುದಾಯಕ್ಕೆ ಉತ್ತಮ ಸೇವೆ ಸಲ್ಲಿಕೆ ಗುರಿ:ವಿಜುಗೌಡ

ಸಿಂದಗಿ:ಜ.6: ರಾಜ್ಯ ಸರಕಾರ ನನ್ನನ್ನು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷನ್ನು ನೇಮಕ ಮಾಡಿದ್ದು ರೈತರ ಸಮುದಾಯಕ್ಕೆ ಅತ್ಯುತ್ತಮ ಸೇವೆ ಸಲ್ಲಿಸುವ ಮೂಲಕ ನನಗೆ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಎಸ್. ಪಾಟೀಲ ಹೇಳಿದರು.
ಪಟ್ಟಣದ ವಿದ್ಯಾಚೇತನ ಪ್ರಕಾಶನ ಅಡಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸನ್ಮಾನೋತ್ತರವಾಗಿ ಅವರು ಮಾತನಾಡಿ, ರೈತರು ಒಂದೇ ತಳಿಯ ಬೆಳೆಗಳನ್ನು ಬೆಳೆಯದೇ ಆಯಾ ಸಂದರ್ಭಕ್ಕೆ ತಕ್ಕಂತ ರೈತರು ಲಾಭದಾಯಕ ಬೆಳೆಗಳ ಬಗ್ಗೆ ತರಬೇತಿ ಬೆಳೆಗಳನ್ನು ಬೆಳೆದಾಗ ಲಾಭ ಪಡೆಯಲು ಸಾದ್ಯ. ಕರ್ನಾಟಕ ರಾಜ್ಯದಲ್ಲಿ ಬಿತ್ತನೆ ಬೀಜಗಳ ಪ್ರಮಾಣೀಕರಣ ಕಾರ್ಯವನ್ನು ಕೈಕೊಳ್ಳುವುದು ಮುಖ್ಯ ಉದ್ದೇಶವಾಗಿರುತ್ತದೆ. ಸಂಸ್ಥೆಯು ಪ್ರಾರಂಭವಾದಾಗಿನಿಂದ ಬೀಜ ಉತ್ಪಾದಕರಿಗೆ, ಬೀಜ ಬೆಳೆಗಾರರಿಗೆ ಮತ್ತು ಅದರಲ್ಲೂ ರೈತ ಸಮುದಾಯಕ್ಕೆ ಅತ್ಯುತ್ತಮ ಸೇವೆ ಒದಗಿಸುತ್ತಾ ಬಂದಿದೆ. ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯು ರಾಜ್ಯದಲ್ಲಿ ಬೆಳೆಯುವ ವಿವಿಧ ಅಧಿಸೂಚಿತ ತಳಿ ಬೆಳೆಗಳ ಬೀಜಗಳನ್ನು ಪ್ರಮಾಣೀಕರಿಸಿ ರೈತ ಬಾಂಧವರಿಗೆ ಸಕಾಲದಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜವನ್ನು ಒದಗಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸುತ್ತಾ ಬಂದಿದೆ. ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಎಸ್. ಪಾಟೀಲ ಅವರನ್ನು ಮಕ್ಕಳ ಸಾಹಿತಿ, ಪ್ರಕಾಶಕ ಹ.ಮ. ಪೂಜಾರ ಅವರು ಸನ್ಮಾನಿಸಿ ಗೌರವಿಸಿದರು.
ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಬಿಜೆಪಿ ಜಿಲ್ಲಾ ವಕ್ತಾರ ರಾಜಶೇಖರ ಪೂಜಾರಿ, ವಿಎಚ್‍ಪಿ ಪ್ರಧಾನ ಕಾರ್ಯದರ್ಶಿ ಶೇಖರಗೌಡ ಹರನಾಳ, ಬಿಜೆಪಿ ಮುಖಂಡ ಬಾಬುಗೌಡ ಪಾಟೀಲ, ಮಹಾದೇವ ಅಂಬಲಿ, ಆನಂದ ಹೂಗಾರ, ನಿತೀನ ಪೂಜಾರಿ, ವಿದ್ಯಾ ಪೂಜಾರಿ, ಸೌಮ್ಯಾ ಪೂಜಾರಿ, ವರ್ಷಾ ಪೂಜಾರ ಸೇರಿದಂತೆ ಇತರರು ಇದ್ದರು.