ರೈನ್ ಬೋ ಲೇಔಟ್ ವಿರುದ್ಧ ಕ್ರಮಗೈಗೊಳ್ಳದ ತಹಶೀಲ್ದಾರ್ ಅಮಾನತು

ಬೆಂಗಳೂರು, ನ.24-ಮಳೆ ನೀರು ನಿಂತು ರೈನ್ ಬೋ ಡ್ರೈವ್ ಲೇಔಟ್ ದೇಶಾದ್ಯಂತ ಹೆಸರುವಾಸಿಯಾಗಿತ್ತು. ಸದ್ಯ ಈ ಲೇಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ ಆರೋಪದಲ್ಲಿ ಕೆ.ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ.ಸರಿಯಾದ ರೀತಿಯಲ್ಲಿ ವಿಚಾರಣೆ ಮಾಡದೇ ಒತ್ತುವರಿದಾರರಿಗೆ ಸಹಕರಿಸಿದ್ದು, ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯು ಬೆಂಗಳೂರು ಪೂರ್ವ ತಾಲೂಕು( ಕೆ.ಆರ್ ಪುರಂ) ತಹಶೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಿ ಆದೇಶಿಸಿದೆ.ಇತ್ತೀಚಿಗೆ ಮಳೆಯಿಂದ ಸರ್ಜಾಪುರ ರಸ್ತೆಯಲ್ಲಿರುವ ರೈನ್​ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು. ರೈನ್​ಬೋ ಡ್ರೈವ್ ಲೇಔಟ್​​ನಲ್ಲಿ ಜಿಲ್ಲಾಡಳಿತ ಸರ್ವೆ ನಡೆಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನ ನಿರ್ಮಿಸಿರುವುದು ಬಹಿರಂಗವಾಗಿತ್ತು.ಆನಂತರ ವಿಲ್ಲಾಗಳ‌ನ್ನ ತೆರವುಗೊಳಿಸುವಂತೆ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ಬಳಿಕ, ಈ ಬಗ್ಗೆ ಕ್ರಮ ಜರುಗಿಸಲು ತಹಶೀಲ್ದಾರ್ ವಿಫಲರಾಗಿದ್ದಾರೆ ಎಂದು ತಿಳಿದುಬಂದಿದೆ.