ರೈಲಿನಿಂದ ಬಿದ್ದು ಮೃತ್ಯು

ಕಾಪು, ನ.೧೮- ರೈಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಾಪುವಿನ ಇನ್ನಂಜೆ ಬಳಿ ನಡೆದಿದೆ. ಇಮ್ರಾನ್ ಮೃತ ದುರ್ದೈವಿ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಮ್ರಾನ್ ಆಕಸ್ಮಿಕವಾಗಿ ರೈಲಿನಿಂಡ ಬಿದ್ದಿದ್ದಾರೆ. ಈ ವೇಳೆ ಅವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.