ಸಂಜೆವಾಣಿ ನ್ಯೂಸ್
ಮೈಸೂರು: ಅ.29:- ವಿದ್ಯುತ್ ಮತ್ತು ರೈಲ್ವೆ ಖಾಸಗೀಕರಣ ವಿರೋಧಿಸಿ ನವೆಂಬರ್ 3ರಂದು ಮೈಸೂರು ರೈಲ್ವೆ ನಿಲ್ದಾಣದ ಮುಂಭಾಗದಲ್ಲಿರುವ ಬಾಬು ಜಗಜೀವನ್ ರಾಮ್ ಪ್ರತಿಮೆ ಮುಂದೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ವಿದ್ಯುತ್ ಮತ್ತು ರೈಲ್ವೆ ಖಾಸಗೀಕರಣ ಹೋರಾಟ ಸಮಿತಿಯ ಸಂಚಾಲಕ ಬಾಲಾಜಿರಾವ್ ಹೇಳಿದರು.
ನಗರದ ಐಡಿಯಲ್ ಜಾವಾ ರೋಟರಿ ಶಾಲೆಯಲ್ಲಿ ವಿದ್ಯುತ್ ಮತ್ತು ರೈಲ್ವೆ ಖಾಸಗೀಕರಣ ಹೋರಾಟ ಸಮಿತಿ ವತಿಯಿಂದ ಶನಿವಾರ ಅಯೋಜಿಸಿದ್ದ ಪ್ರಚಾರಾಂದೋಲನ ದುಂಡು ಮೇಜಿನ ಸಭೆ ಉದ್ದೇಶಿಸಿ ಮಾತನಾಡಿದ ಅವರು
ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈಲ್ವೆ ಕ್ಷೇತ್ರವನ್ನೂ ಖಾಸಗೀಕರಣ ಮಾಡಲು ಹೊರಟಿದೆ. ರೈಲ್ವೆ ನಿಲ್ದಾಣಗಳು, ನಿಲ್ದಾಣಗಳ ಸುತ್ತ ಇರುವ ರೈಲ್ವೆ ಭೂಮಿ, ರೈಲ್ವೆ ಹಳಿಗಳು, ರೈಲುಗಳು ಸರಕು ದಾಸ್ತಾನು ಮುಂತಾದವರು ನಮ್ಮಆಸ್ತಿ.ಈಗಾಗಲೇ ಭಾರತದಲ್ಲಿ 7300 ಕ್ಕೂ ಹೆಚ್ಚು ರೈಲು ನಿಲ್ದಾಣಗಳು, 13400 ಪ್ರಯಾಣಿಕರ ರೈಲುಗಳು ಹಾಗೂ ಪ್ರತಿದಿನ 2.40 ಕೋಟಿ ಪ್ರಯಾಣಿಕರು ಸಂಚರಿಸುತ್ತಾರೆ. 9141 ಗೂಡ್ಸ್ ರೈಲುಗಳು ಪ್ರತಿ ದಿನ ಸಂಚರಿಸುತ್ತಿವೆ. ಆಹಾರ ಧಾನ್ಯಗಳು, ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳು, ಕೃಷಿ ಮತ್ತು ಕೈಗಾರಿಕೆ ಉತ್ಪನ್ನಗಳು ಸೇರಿದಂತೆ ಪ್ರತಿ ದಿನ ಸಾಗಣೆ ಮಾಡಲಾಗುತ್ತಿದೆ. 1991ರಿಂದ ಜಾರಿಗೆ ಬಂದ ಉದಾರೀಕರಣ ನೀತಿಯನ್ನು ಮೋದಿ ಸರ್ಕಾರವು ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಖಾಸಗೀಕರಣದಿಂದ ರೈಲ್ವೆಗೆ ಅಪಾರ ಪ್ರಮಾಣದಲ್ಲಿ ನಷ್ಟವಾಗುತ್ತದೆ. ಸಿಬ್ಬಂದಿಗಳಿಗೆ ಸಮಸ್ಯೆಯಾಗುತ್ತದೆ. ದೇಶಕ್ಕೂ ಸಹ ವಿನಾಶಕಾರಿಯಾಗಲಿದೆ. ಆದ್ದರಿಂದ ಖಾಸಗೀಕರಣ ಕೈಬಿಡುವಂತೆ ನವೆಂಬರ್ 3ರಂದು ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯುತ್ ಮತ್ತು ರೈಲ್ವೆ ಖಾಸಗೀಕರಣ ಹೋರಾಟ ಸಮಿತಿ ಸಂಚಾಲಕ ಎಂ ಅಣ್ಣಪ್ಪ, ಸಹ ಸಂಚಾಲಕ. ಧನಂಜಯ, ಪೆÇ್ರ.ಲಕ್ಷ್ಮೀ ನಾರಾಯಣ್, ರೈತ ಸಂಘಟನೆಯ ಜಿಲ್ಲಾ ಮುಖಂಡ ಮರಂಕಯ್ಯ, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಎ ಐ ಸಿ ಟಿಯು ಅನಿಲ್ , ಚೌಡಳ್ಳಿ ಜವರಯ್ಯ ಇನ್ನಿತರರು ಇದ್ದರು