ರೈಲ್ವೆಯನ್ನು ಇಲಾಖೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ವಿಫಲ -ಮಾಜಿ ಸಚಿವ ಕೆ. ಹೆಚ್. ಮುನಿಯಪ್ಪ

ಚಿತ್ರದುರ್ಗ ಜ 03 : ರಾಜ್ಯದಲ್ಲಿ ರೈಲ್ವೆಯನ್ನು ಇಲಾಖೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಮಾಜಿ ಸಚಿವ ಕೆ. ಹೆಚ್. ಮುನಿಯಪ್ಪ ಆರೋಪಿಸಿದರು.
ನಗರದ ಮಾದಾರ ಚೆನ್ನಯ್ಯ ಗುರುಪೀಠದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರೈಲ್ವೆ ಸಚಿವನಾಗಿದ್ದಾಗ 2010-11, 2011-12 ರ ಅವಧಿಯಲ್ಲಿ ನೀಡಿದ ಅನುದಾನಗಳನ್ನು ಇದುವರೆಗೂ ಮುಗಿಸಿಲ್ಲಾ, ಇದು ರಾಜ್ಯ ಸರ್ಕಾರದ ವಿಫಲತೆಯನ್ನು ತೋರಿಸುತ್ತದೆ. ಎಂದು ಕಿಡಿಕಾರಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದು, ಸುಗ್ರಿವಾಜ್ಞೆಗಳ ಮೂಲಕ ಜನವಿರೋಧಿ ನೀತಿಗಳನ್ನು ಜಾರಿಗೆ ತಂದು ಕಾರ್ಮಿಕರನ್ನು, ರೈತರನ್ನು ಬೀದಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಆರ್ಥಿಕ ಪರಿಸ್ಥಿತಿ ನೆಲ ಕಚ್ಚಿದೆ. ಆದರೂ ಕೂಡ ಪ್ರಧಾನಿ ಮೋದಿಯವರು ಎಚ್ಚೆತ್ತುಕೊಂಡಿಲ್ಲ. ಈಗಲಾದರೂ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ನನ್ನ ಅವಧಿಯಲ್ಲಿ ದಾವಣಗೆರೆ – ಚಿತ್ರದುರ್ಗ -ತುಮಕೂರು ನೇರ ರೈಲ್ವೆ ಯೋಜನೆಯ ಅನುಷ್ಠಾನಕ್ಕೆ ಯೋಜನೆ ರೂಪಿಸಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಅದು ಇದುವರೆಗೂ ಪೂರ್ಣಗೊಂಡಿಲ್ಲ ಇದನ್ನು ಶೀಘ್ರವೇ ಪೂರ್ಣಗೊಳಿಸಿ ಜನತೆಗೆ ಅನುಕೂಲ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು.
ರೈಲ್ವೆ ಸೇವೆಯಿಂದ ಪರಿಸರದ ಮೇಲೆ ಯಾವುದೇ ಪರಿಣ‍ಾಮ ಬೀರುವುದಿಲ್ಲ, ಇಂಧನ ಹಾಗೂ ಸಮಯ ಉಳಿತಾಯವಾಗಲಿದೆ. ಸಮರ್ಪಕ ರೈಲ್ವೆ ನೀತಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಇದನ್ನು ಬಿಜೆಪಿ ಸರ್ಕಾರ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಮುಂದಿನ ರಾಜ್ಯದ ರಾಜಕೀಯದಲ್ಲಿ ತೊಡಗಿಕೊಳ್ಳಬೇಕೆಂಬ ಹಂಬಲವಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮಖನಾಗುತ್ತೇನೆ ಎಂದು ಹೇಳಿದ ಅವರು ನಾನು ನನ್ನ ಜಿಲ್ಲೆ ಬಿಟ್ಟು ಬೇರೆ ಎಲ್ಲಿಯು ಸ್ಪರ್ಧಿಸುವುದಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಬಿ.ಎನ್ ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ತಾಜ್ ಪೀರ್, ಜಿ.ಎಸ್.ಮಂಜುನಾಥ್ ಭಾಗವಹಿಸಿದ್ದರು.