ರೈಲ್ವೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಬಾಗಲಕೋಟೆ,ನ.7 : ಬಾಗಲಕೋಟೆ ರೈಲ್ವೆ ನಿಲ್ದಾಣಕ್ಕೆ ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್ ಭೇಟಿ ನೀಡಿ ನಿಲ್ದಾಣದ ಆವರಣದಲ್ಲಿ ಕೈಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು.
ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ ಅವರು ಎ.ಕೆ.ಸಿಂಗ ಅವರ ಜೊತೆ ರೈಲು ನಿಲ್ದಾಣ ಅಭಿವೃದ್ದಿ ಕುರಿತು ಚರ್ಚಿಸಿದರು. ರೈಲು ನಿಲ್ದಾಣದಲ್ಲಿ ಪ್ರತಿಯೊಂದು ಪ್ಲಾಟಫಾರ್ಮಗಳಲ್ಲಿ ಪ್ರಯಾಣಿಕರಿಗೆ ಕೂಡಲು ಆಸನಗಳ ವ್ಯವಸ್ಥೆ ಹಾಗೂ ಮೇಲ್ಚಾವಣಿ ವ್ಯವಸ್ಥೆ ಮಾಡಲು ತಿಳಿಸಿದರು. ಅಲ್ಲದೇ ರೈಲು ನಿಲ್ದಾಣದ ಆವರಣದಲ್ಲಿ ನಿರ್ಮಿಸುತ್ತಿರುವ ನೌಕರರ ವಸತಿ ಗೃಹಗಳ ಸುತ್ತಮುತ್ತಲೂ ಕಂಪೌಂಡ್ ನಿರ್ಮಾಣ ಹಾಗೂ ಸ್ವಚ್ಛತೆ ಆದ್ಯತೆ ನೀಡಲು ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.
ರೈಲು ನಿಲ್ದಾಣದ ಆವರಣದಲ್ಲಿ ಸುತ್ತಮುತ್ತಲೂ ಕಂಪೌಂಡ್ ನಿರ್ಮಾಣವಾಗಬೇಕು. ಸ್ವಚ್ಚತೆಗೆ ಹೆಚ್ಚು ಗಮನಹರಿಸುವಂತೆ ಅಧಿಕಾರಿಗಳು ಸೂಚಿಸಿಲು ತಿಳಿಸಿದರು. ಗದಗ, ಇಲಕಲ್ಲ ಹಾಗೂ ಗಜೇಂದ್ರಗಡ ಮಾರ್ಗದ ಸರ್ವೇ ಕಾರ್ಯ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದರು. ಭೇಟಿ ಸಂದರ್ಭದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ, ಬಾಗಲಕೋಟೆ ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ಕಮಲ ಕಿಶೋರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.