ರೈಲ್ವೆ ಬೋಗಿಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ

ನವದೆಹಲಿ,ಏ.೧೯- ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ೭೫ ರೈಲ್ವೆ ಬೋಗಿಗಳನ್ನು ಐಸೋಲೇಷನ್ ಬೋಗಿಗಳಾಗಿ ಪರಿವರ್ತನೆ ಮಾಡಲಾಗಿದೆ.
ದೆಹಲಿಯಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆನಂದ್ ವಿಹಾರ್ ಟರ್ಮಿನಲ್ ನಲ್ಲಿ ೧೦ ಸಾವಿರ ಸೋಂಕಿತರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
೫೦ ಬೋಗಿಗಳಲ್ಲಿ ಸಂಪೂರ್ಣ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದರಿಂದ ೮೦೦ ಮಂದಿ ರೋಗಿಗಳಿಗೆ ಚಿಕಿತ್ಸೆಗೆ ಸಹಕಾರಿಯಾಗಲಿದೆ .
ಕೊರೊನಾ ಸೋಂಕಿನ ಲಘು ಸಮಸ್ಯೆ ಇರುವ ಮಂದಿಯನ್ನು ಇಲ್ಲಿಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದಲ್ಲದೆ ಇನ್ನೂ ೨೫ ಬೋಗಿಗಳನ್ನು ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಇದರಿಂದಾಗಿ ಇನ್ನೂ ಹೆಚ್ಚುವರಿ ೪೦೦ ಹಾಸಿಗೆ ಲಭ್ಯವಾಗಲಿದೆ ಎಂದು ರೈಲ್ವೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಆನಂದ್ ವಿಹಾರ್ ಮತ್ತು ಶಾಕುರ್ ಬಸ್ತಿ ರೈಲು ನಿಲ್ದಾಣಗಳಲ್ಲಿ ಸರಿ ಸುಮಾರು ೪೦೦೨ ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ನಿತ್ಯ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಹಾಸಿಗೆ ಒದಗಿಸುವುದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ರೈಲು ಬೋಗಿಗಳನ್ನು ಹಾಸಿಗೆಯನ್ನಾಗಿ ಪರಿವರ್ತನೆ ಮಾಡಲಾಗುತ್ತಿದೆ.
ದೆಹಲಿಯಲ್ಲಿ ಇತ್ತೀಚೆಗೆ ಪ್ರತಿದಿನ ೨೫ ಸಾವಿರದಂತೆ ಸೋಂಕು ಸಂಖ್ಯೆ ನಿತ್ಯ ಏರಿಕೆಯಾಗುತ್ತಿದೆ. ಸೋಂಕು ಹೆಚ್ಚಳವನ್ನು ತಡೆಗಟ್ಟಲು ಸರ್ಕಾರ ಕ್ರಮಕೈಗೊಳ್ಳುತ್ತಿದೆ