ರೋಗಿಗಳನ್ನು ವೈದ್ಯರು ನಿರ್ಲಕ್ಷಿಸಬೇಡಿ-ದದ್ದಲ್

ರಾಯಚೂರು.ಏ.೨೯-ದೇಶದಲ್ಲಿ ಕೋವಿಡ್ ಎರಡನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದು ವೈದ್ಯರು ರೋಗಿಗಳನ್ನು ಯಾವುದೇ ಕಾರಣಕ್ಕೆ ನಿರ್ಲಕ್ಷ್ಯ ಮಾಡಬೇಡಿ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಹೇಳಿದರು.
ಅವರಿಂದು ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿನೀಡಿ ವೈದ್ಯರು ಮತ್ತು ಆಶಾ ಕಾರ್ಯಕರ್ತೆರ ಜೊತೆಗೆ ಸಭೆ ನಡೆಸಿ ಮಾತನಾಡಿದ ಅವರು ಆಸ್ಪತ್ರೆಗೆ ಜನರಿಗೆ ಸಮರ್ಪಕವಾಗಿ ವ್ಯಾಕ್ಸಿನ್ ನೀಡಬೇಕು ಯಾರು ಕೂಡ ನಿರ್ಲಕ್ಷಿಸಬಾರದು ಈಗಾಗಲೇ ೪೫ ವಯಸ್ಸು ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ವ್ಯಾಕ್ಸಿನ್ ನೀಡುತ್ತಿದ್ದಾರೆ. ಆದರಿಂದ ಎಲ್ಲರೂ ತಪ್ಪದೇ ವ್ಯಾಕ್ಸಿನ್ ಪಡೆದುಕೊಳ್ಳಿ ಎಂದರು ವೈದ್ಯರು ಜನರಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಬೇಕು ಸಾರ್ವಜನಿಕರು ಮಾಸ್ಕ ಸ್ಯಾನಿಟೈಜರ್ ತಪ್ಪದೇ ಬಳಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿಗಳಾದ ಚಂದ್ರಶೇಖರ್,ಅಂಗನವಾಡಿ ಕಾರ್ಯಕರ್ತಯರು,ಆಶಾ ಕಾರ್ಯಕರ್ತರು, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.