ರೋಟರಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ದಾವಣಗೆರೆ.ಏ.೨೧; ನ್ಯಾಮತಿ ತಾಲ್ಲೂಕಿನ ಟಿ.ಗೋಪಗೊಂಡನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ದಾವಣಗೆರೆ ವಿದ್ಯಾನಗರ ರೋಟರಿ ಸಂಸ್ಥೆಯಿಂದ ೩೫ ಟ್ಯಾಬ್‌ಗಳನ್ನು ವಿತರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ರೋ. ಎನ್.ಬಿ. ಮೃತ್ಯುಂಜಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಉಪರಾಜ್ಯಪಾಲರಾದ ರೋ.ಹೆಚ್.ಎಂ. ಚಂದ್ರಾಚಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ಶಾಲೆಯ ಮುಖ್ಯೋಪಾಧ್ಯಾಯ ಕೆ.ಸಿ. ಮಂಜಪ್ಪ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಉಮಾ ಸುರೇಶ್ ಸೇರಿದಂತೆ ರೋಟರಿ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಿದ್ದಾಗಿ ಸಂಸ್ಥೆಯ ಸದಸ್ಯ ರೋ.ರವಿಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ