ರೋಟರಿ ಸಂಸ್ಥೆಯ ಸದಸ್ಯರಿಂದ ಶ್ರಮದಾನದ ಮೂಲಕ ಸ್ವಚ್ಛತಾ ಅಭಿಯಾನ

ಅಥಣಿ: ಅ.4:ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗಾಗಿ ಮತ್ತು ಆರೋಗ್ಯವಂತ ಭಾರತ ಕಟ್ಟುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸ್ವಚ್ಛತಾ ಆಂದೋಲನವನ್ನು ಮಹಾತ್ಮ ಗಾಂಧೀಜಿಯವರ ಜಯಂತಿಗೆ ಮಾತ್ರ ಸೀಮಿತವಾಗದೆ ಪ್ರತಿದಿನ ನಮ್ಮ ಜೀವನದಲ್ಲಿ ಸ್ವಚ್ಛತೆ ರೂಢಿಯಾಗಬೇಕು ಎಂದು ಅಥಣಿ ರೋಟರಿ ಸಂಸ್ಥೆಯ ಅಧ್ಯಕ್ಷ ಅನಿಲ ದೇಶಪಾಂಡೆ ಹೇಳಿದರು.
ಅವರು ಅಥಣಿ ಪಟ್ಟಣದ ಲಕ್ಷ್ಮೀನಾರಾಯಣ ನಗರದಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ರೋಟರಿ ಸದಸ್ಯರು ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಸಾರ್ವಜನಿಕರು ಸರ್ಕಾರಿ ಮತ್ತು ಸಾರ್ವಜನಿಕ ಉದ್ಯಾನವನಗಳ ಸ್ವಚ್ಛತೆಗಾಗಿ ಸ್ವಯಂ ಪ್ರೇರಿತವಾಗಿ ಶ್ರಮದಾನ ಮಾಡಬೇಕು. ಸಾರ್ವಜನಿಕರಲ್ಲಿಯೂ ಕೂಡ ಸ್ವಚ್ಛತೆಯ ಬಗ್ಗೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಹೇಳಿದರು.
ರೋಟರಿ ಸಂಸ್ಥೆಗಳ ಎಲ್ಲಾ ಸದಸ್ಯರು ಸ್ವಚ್ಛತಾ ಅಭಿಯಾನದ ಜಾಗೃತಿ ಕಾರ್ಯಕ್ರಮದೊಂದಿಗೆ ಲಕ್ಷ್ಮೀನಾರಾಯಣ ನಗರದ ಉದ್ಯಾನವನದಲ್ಲಿ ಸ್ವಚ್ಛತಾ ಶ್ರಮದಾನ ಮಾಡಿದರು.
ಈ ಸಂದರ್ಭದಲ್ಲಿ ಇನ್ನರ್ ವಿಲ್ ಕ್ಲಬ್ ನ ಅಧ್ಯಕ್ಷ ಲಲಿತಾ ಮೇಕನಮರಡಿ, ರೋಟರಿ ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷ ಕು. ತನುಜ ಪೆÇೀಂಡೆ, ಡಾ. ಪಿ ಪಿ ಮಿರಜ, ಡಿ ಡಿ ಮೇಕನಮರಡಿ, ಸುರೇಶ್ ಪಾಟೀಲ, ಡಾ. ಸುಮೇದ ಮಿರಜ, ಸಚಿನ್ ದೇಸಾಯಿ, ಮೇಘರಾಜ್ ಪರಮಾರ್, ವೈ ಎ ಜಮಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.