ರೋಮಾಂಟಿಕ್ ರಾಣಿಯರು…

ಕನ್ನಡ ‌ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿರುವ ‘ಇಬ್ಬರ ನಡುವಿನ‌ ಮುದ್ದಿನ ರಾಣಿ’ ಚಿತ್ರ ಸೆಟ್ಟೇರಿದೆ.
ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ಕಥಾಹಂದರ ಹೊಂದಿರುವ ಚಿತ್ರವನ್ನು ಎಂ.ಎಸ್.ಎನ್ ರಾಜಾ ನಿರ್ದೇಶಿಸುತ್ತಿದ್ದಾರೆ
ರೆಸಾರ್ಟ್ ವೊಂದರಲ್ಲಿ ನಡೆದ ಮುಹೂರ್ತ ಸಮಾರಂಭಕ್ಕೆ ರಾಜಕೀಯ ಮುಖಂಡ ಕರ್ಮೂರು ವೆಂಕಟ ರೆಡ್ಡಿ ಮತ್ತಿತರರು ಆಗಮಿಸಿ ಶುಭ ಹಾರೈಸಿದರು.
ಬೆಂಗಳೂರು, ದೊಡ್ಡಬಳ್ಳಾಪುರ, ಮಡಿಕೇರಿ ಮುಂತಾದ ಕಡೆ ೧೫ ‌ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.
ನಿರ್ಮಾಪಕ ಸೌರಭ್ ಕಿಶೋರ್ ನಾಯಕರಾಗಿ ನಟಿಸುತ್ತಿರುವ ಚಿತ್ರದ ತಾರಾಬಳಗದಲ್ಲಿ ಆಕಾಶ್ ಆರಾಧ್ಯ, ದಿವ್ಯ ರಾವ್, ರೂಪ ರಾಯಪ್ಪ, ಸಂಜನ ನಾಯ್ಡು, ಮಹೇಂದರ್, ವಿಕ್ಚರಿ ವಾಸು, ಶೇಷಗಿರಿ, ಅಂಜಲಿ, ಲೋರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸೌರಭ್ ಕಿಶೋರ್ ನಿರ್ಮಿಸುತ್ತಿರುವ ಚಿತ್ರಕ್ಕೆ ಪಿ.ಎಂ.ಆರ್ ಕೋಣ್ಣಾರೆಡ್ಡಿ ಸಹ ನಿರ್ಮಾಪಕರು. ವಿಜಯ್ ಕುಮಾರ್ ಹಾಗೂ ಮಧುಬಾಬು ಅವರು ಕಾರ್ಯಕಾರಿ ನಿರ್ಮಾಪಕರು.
ನಾಲ್ಕು ಹಾಡುಗಳಿರುವ ಚಿತ್ರಕ್ಕೆ ಎಂ.ಎಂ.ಮೋಹನ್ ಸಂಗೀತ ಬಾಲು‌ ಸುರೇಶ್ ಛಾಯಾಗ್ರಹಣವಿದೆ‌.