ಮುಂಬೈ,ಜೂ.೧೬-ವಿಶ್ವ ಟೆಸ್ಟ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದ ಬೆನ್ನೆಲ್ಲೇ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಬಿಸಿಸಿಐ ಗಂಭೀರ ಚಿಂತನೆ ನಡೆಸಿದೆ.
ಜು.೧೨ ರಿಂದ ಭಾರತ ವೆಸ್ಟ್ ಇಂಡಿಸ್ ಪ್ರವಾಸ ಕೈಗೊಳ್ಳಲಿದ್ದು, ೨ ಟೆಸ್ಟ್ ಮೂರು ಏಕ ದಿನ ಪಂದ್ಯ ಮತ್ತು ೫ ಟಿ-೨೦ ಪಂದ್ಯಗಳನ್ನು ಆಡಲಿದೆ. ಈಗಾಗಲೇ ಭಾರತ ಕ್ರಿಕೆಟ್ ತಂಡದ ಆಟಗಾರರು ವಿಶ್ರಾಂತಿಗೆ ಮೊರೆ ಹೋಗಿದ್ದಾರೆ. ಇದನ್ನೇ ನೆಪ ಮಾಡಿಕೊಂಡು ವಿಂಡೀಸ್ ವಿರುದ್ಧದ ಟೆಸ್ಟ್ ಅಥವಾ ವೈಟ್ ಬಾಲ್ ಸರಣಿಯಿಂದ ಕೈ ಬಿಡುವ ಸಾಧ್ಯತೆ ದಟ್ಟವಾಗಿದೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.
ಆಟಗಾರರು ಕುಟುಂಬದ ಸದಸ್ಯರ ಜೊತೆ ಕಾಲ ಕಳೆಯುತ್ತಿರುವ ಹೊತ್ತಲ್ಲೇ ರೋಹಿತ್ ಶರ್ಮಾಗೆ ಬಿಸಿಸಿಐ ಶಾಕ್ ನೀಡಲು ಮುಂದಾಗಿದೆ. ಒಂದು ವೇಳೆ ಶರ್ಮಾ ಅವರಿಗೆ ವಿಶ್ರಾಂತಿ ನೀಡಿದರೆ ತಂಡದ ನಾಯಕತ್ವವನ್ನು ಯಾರಿಗೆ ಕೊಡಬೇಕೆಂಬ ಬಗ್ಗೆ ಬಿಸಿಸಿಐ ಪಡಸಾಲೆಯಲ್ಲಿ ಚರ್ಚೆಗಳು ನಡೆಯುತ್ತಿವೆ.
ಮತ್ತೊಂದೆಡೆ ವೆಸ್ಟ್ ಇಂಡಿಸ್ ತಂಡ ಪ್ರಬಲವಾಗಿಲ್ಲ ಹೀಗಾಗಿ ಆಯ್ಕೆ ಸಮಿತಿ ಉತ್ತಮ ಫಾರಂನಲ್ಲಿ ಆಟಗಾರರನ್ನು ವೆಸ್ಟ್ ಇಂಡಿಸ್ ಪ್ರವಾಸಕ್ಕೆ ಕಳುಹಿಸಿಕೊಡಲು ಆಯ್ಕೆ ಸಮಿತಿ ಚಿಂತನೆ ನಡೆಸಿದ್ದು, ಇದರ ಒಂದು ಭಾಗವಾಗಿಯೇ ರೋಹಿತ್ ಶರ್ಮಾಗೆ ವಿಶ್ರಾಂತಿ ನೆಪದಲ್ಲಿ ಕೊಕ್ ನೀಡಲು ಮುಂದಾಗಿದೆ.