ರೌಡಿಗಳಾದ ಸಾಗರ್, ಸಂಜಯ್ ಸೇರಿ ೮ಮಂದಿ ಸೆರೆ

ಬೆಂಗಳೂರು,ಮೇ.೧೩-ಹನುಮಂತನಗರದ ಪಿಇಎಸ್ ಕಾಲೇಜು ಬಳಿ ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ದರೋಡೆಗೆ ಸಂಚು ರೂಪಿಸಿದ್ದ ಕುಖ್ಯಾತ ರೌಡಿಗಳಾದ ಸಾಗರ್ ಅಲಿಯಾಸ್ ವೀರು,ಸಂಜಯ್ ಅಲಿಯಾಸ್ ಸಂಜಯ ಹಾಗೂ ಅವರ ೮ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಗಳಾದ ಸಾಗರ್ ಹಾಗೂ ಸಂಜಯ್ ಸಹಚರರ ಜೊತೆ ಸೇರಿ ಅಪರಾಧ ಕೃತ್ಯ ಎಸಗುವುದು ದರೋಡೆ ಸಂಚಿನ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು.
ಅದರಂತೆ ಹನುಮಂತನಗರದ ಪಿಇಎಸ್ ಕಾಲೇಜು ಬಳಿ ಎರಡು ಕಾರುಗಳನ್ನು ನಿಲ್ಲಿಸಿಕೊಂಡು ನಿನ್ನೆ ದರೋಡೆಗೆ ಸಂಚು ಹಾಕಿದ್ದಾಗ ಕಾರ್ಯಾಚರಣೆ ಕೈಗೊಂಡು
ಕಾರುಗಳು ಹಾಗೂ ಮಾರಕಾಸ್ತ್ರಗಳ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತ ತಿಳಿಸಿದರು.
ಬಂಧಿತರ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದೂ ತಿಳಿಸಿದರು.