ರೌಡಿ ಶೀಟರ್ ಹತ್ಯೆ : ಆರೋಪಿಗಳು ಪರಾರಿ


ಶಿವಮೊಗ್ಗ, ನ. ೧೦: ನಗರದ ಬಸವನಗುಡಿ ಬಡಾವಣೆಯ ೫ ನೇ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ರೌಡಿಶೀಟರ್ನೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಂಜುನಾಥ್ ಭಂಡಾರಿ (೩೦) ಕೊಲೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಭಂಡಾರಿ ಮೇಲೆ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಮೂವರು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲಿಸಿದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.